ಬೇಡಿಕೆ ಈಡೇರಿಸಲು ರಾಜ್ಯ ನೌಕರರ ಮನವಿ
ಚಿಂತಾಮಣಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಚಿಂತಾಮಣಿ ಶಾಖೆ ನೌಕರರಿಂದ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ತಾಲೂಕು ಉಪ ತಹಸೀಲ್ದಾರ್ ಶ್ರೀನಿವಾಸಶೆಟ್ಟಿ ಅವರಿಗೆ ಶಿಕ್ಷಕರು ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ಹತ್ತು ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಪಟ್ಟಣದಲ್ಲಿನ ತಾಲೂಕು ಕಚೇರಿ ಮುಂದೆ ಬೇಡಿಕೆ ದಿನಾಚರಣೆ ಅಂಗವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದರು.ವೇತನ ತಾರತಮ್ಯ ಸರಿಪಡಿಸಬೇಕು, ಮನೆ ಬಾಡಿಗೆ, ಭತ್ಯೆ ಹೆಚ್ಚಳ, ತುಟ್ಟಿ ಭತ್ಯೆ ಮಂಜೂರಾತಿ ಸೂತ್ರವನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರದ ನೌಕರರಿಗೆ 2 ವರ್ಷದ ಶಿಶುಪಾಲನ ರಜೆ ನೀಡುವುದು. ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ. ಮಲ್ಲಿಕಾರ್ಜುನಸ್ವಾಮಿ, ಅಧ್ಯಕ್ಷ ಸುಬ್ಬಾರೆಡ್ಡಿ, ಉಪಾಧ್ಯಕ್ಷ ವೆಂಕಟರವಣರೆಡ್ಡಿ, ಪ್ರಧಾನ ಕಾರ್ಯದರ್ಶಿ, ಎಂ.ಎ. ಪ್ರಕಾಶ್, ಕಂಚಿರೆಡ್ಡಿ, ಸದಸ್ಯರು, ನೌಕರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

