ಇಂಧನ ದರ ಏರಿಕೆ ಖಂಡಿಸಿ ಪ್ರತಿಭಟನೆ
ಬಂಗಾರಪೇಟೆ: ಪದೇ ಪದೇ ಇಂಧನ ದರ ಏರಿಕೆ ಮಾಡುವ ಮೂಲಕ ಕೇಂದ್ರದ ಯುಪಿಎ ಸರ್ಕಾರ ಜನ ಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಹಾಕುತ್ತಿದೆ ಎಂದು ಆರೋಪಿಸಿ, ಈ ಕೂಡಲೇ ಏರಿಕೆ ದರವನ್ನು ಇಳಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ತಾಲೂಕು ಕಚೇರಿ ಎದುರು ಧರಣಿ ನಡೆಸಿದರು.
ಕೇಂದ್ರ ಸರ್ಕಾರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನರನ್ನು ಸೆಳೆಯಲು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು ಇಳಿಕೆ ಮಾಡಿತ್ತು.
ಚುನಾವಣೆ ಬಳಿಕ ಈಗ ಕಳೆದ ಎರಡು ತಿಂಗಳ ಅವಧಿಯಲ್ಲಿ ಸತತವಾಗಿ ಮೂರು ಬಾರಿ ಬೆಲೆ ಏರಿಕೆ ಮಾಡುವ ಮೂಲಕ ಜನ ವಿರೋಧಿ ಸರ್ಕಾರ ಎನಿಸಿಕೊಂಡಿದೆ.
ಬಡವರ ಸಂಕಷ್ಟ ಕೇಳುವವರ್ಯಾರು: ಅಲ್ಲದೆ, ಪದೇ ಪದೇ ಇಂಧನ ದರ ಏರಿಕೆ ಮಾಡುವುದರಿಂದ ಸಾಮಾನ್ಯ ಜನರು ಹಾಗೂ ಮಧ್ಯಮ ವರ್ಗದ ಜನರು ಬಳಸುವ ದಿನ ನಿತ್ಯ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೆ ಏರುವುದರಿಂದ ಬಡವರು ಅಗತ್ಯ ವಸ್ತುಗಳಿಂದ ವಂಚಿತರಾಗುವಂತಾಗಿದೆ. ಇದಲ್ಲದೆ ಬಡವರು ಪ್ರಯಾಣಿಸುವ ಬಸ್‌ಗಳ ಸೇವೆಯೂ ಏರಿಕೆ ಕಂಡಿವೆ.ಯಾವುದೇ ಬೆಲೆ ನಿಯಂತ್ರಣ ಮಾಡದೆ ಕೇಂದ್ರ ಸರ್ಕಾರ ಜನ ಸಾಮಾನ್ಯರಿಂದ ದೂರ ಸರಿಯುತ್ತಿದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಯುಪಿಎಗೆ ಪಾಠ ಕಲಿಸಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಸರ್ಕಾರವನ್ನು ಜನರು ತಿರಸ್ಕರಿಸಿ ಜನಸಾಮಾನ್ಯರಿಗೆ ನೆರವಾಗುವಂತಹ ಪಕ್ಷವನ್ನು ಬೆಂಬಲಿಸಬೇಕೆಂದು ಆಗ್ರಹಿಸಿದರು.
ಶೋಷಿತ ವರ್ಗದ ವಿರೋಧಿ: ಯುಪಿಎ ಸರ್ಕಾರ ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಆಳುತ್ತಿದ್ದರೂ ಬಡವರಿಗೆ ಅನುಕೂಲವಾಗುವಂತ ಯೋಜನೆಗಳನ್ನು ಹಮ್ಮಿಕೊಂಡಿಲ್ಲ ಬದಲಿಗೆ ಕೆಲವೇ ಕಂಪನಿಗಳಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದ ಬಡವರನ್ನು ಮೂಲ ಸೌಲಭ್ಯಗಳಿಂದ ವಂಚಿತವಾಗುವಂತೆ ಮಾಡುತ್ತಿದೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಭ್ರಷ್ಟಾಚಾರದಲ್ಲಿ ನಿರತವಾಗಿರುವ ಯುಪಿಎ ಸರ್ಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುವ ಕಾಲ ದೂರವಿಲ್ಲ ಆದ್ದರಿಂದ ಕೂಡಲೇ ಏರಿಕೆ ಮಾಡಿರುವ ಇಂಧನ ಬೆಲೆಗಳನ್ನು ಇಳಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಂಘದ ತಾಲೂಕು ಘಟಕದ ಅಧ್ಯಕ್ಷ ರಾಮೇಗೌಡ, ಅಬ್ಬಣಿ ಶಿವಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಲಕ್ಷ್ಣಣ್,ಅಂಜಿ, ಕಾಮಸಮುದ್ರ ಘಟಕದ ಅಧ್ಯಕ್ಷ ರಮೇಶ್, ವೆಂಕಟೇಶ್, ನಾಗರಾಜ್, ಮೋಹನ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

