ಕೋಲಾರ

ಹೊಸ ತಾಲೂಕು ರಚನೆ ಕುರಿತು ಪರಿಶೀಲಿಸಿ ಕ್ರಮ: ಸಿಎಂ

Published On :

ಕ.ಪ್ರ.ವಾರ್ತೆ ಬೆಂಗಳೂರು ಜು. 3
ದೊಡ್ಡ ತಾಲೂಕುಗಳನ್ನು ವಿಭಜಿಸಿ ಹೊಸ ತಾಲೂಕು ರಚನೆ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೌರಿಬಿದನೂರು ತಾಲೂಕಿನ ಮಂಚನಬೆಲೆ ಹೋಬಳಿಯನ್ನು ತಾಲೂಕು ಎಂದು ಘೋಷಿಸುವಂತೆ ಕೋರಿ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ನೇತೃತ್ವದ ನಿಯೋಗ ಬುಧವಾರ ತಮ್ಮನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಹೊಸ ತಾಲೂಕುಗಳ ರಚನೆ ಕುರಿತಂತೆ ನಾಲ್ಕು ವರದಿಗಳು ಸರ್ಕಾರದ ಮುಂದಿವೆ. 40ರಿಂದ 45 ಹೊಸ ತಾಲೂಕುಗಳನ್ನು ರಚಿಸಬೇಕು ಎಂಬ ಬೇಡಿಕೆ ಸರ್ಕಾರದ ಮುಂದಿದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ವರದಿಯಲ್ಲಿಲ್ಲದ ನಾಲ್ಕೈದು ತಾಲೂಕುಗಳನ್ನು ಸೇರಿಸಿ ಗೊಂದಲ ಮೂಡಿಸಿದೆ ಎಂದು ಹೇಳಿದರು.
ಏಕಾಏಕಿ ಹೊಸ ತಾಲೂಕುಗಳ ಘೋಷಣೆ ಸಾಧ್ಯವಿಲ್ಲ. ತಾಲೂಕು ಘೋಷಣೆಯಾದ ಮೇಲೆ ಅಲ್ಲಿ ಮೂಲ ಸೌಕರ್ಯ ಕಲ್ಪಿಸಲು ಪ್ರತಿ ತಾಲೂಕಿಗೆ 75 ಕೋಟಿ ಹೊರೆ ಬೀಳುತ್ತದೆ. 45 ತಾಲೂಕುಗಳನ್ನು ರಚನೆ ಮಾಡಬೇಕಾದರೆ ಸಾವಿರಾರು ಕೋಟಿ ರುಪಾಯಿ ಬೇಕಾಗುತ್ತದೆ. ಆದ್ದರಿಂದ ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಮಂಚನಬೆಲೆ ಹೋಬಳಿಯನ್ನು ತಾಲೂಕು ಕೇಂದ್ರವಾಗಿ ಪರಿವರ್ತಿಸುಬ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.