ಕೃಷಿ ಮಾ. ಮಂಡಳಿ ಸದಸ್ಯೆಯಾಗಿ ಎಪಿಎಂಸಿ ಅಧ್ಯಕ್ಷೆ ರಾಜರಾಜೇಶ್ವರಿ ಆಯ್ಕೆ
ಕೋಲಾರ: ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯರಾಗಿ ಕೋಲಾರದ ಎಪಿಎಂಸಿ ಅಧ್ಯಕ್ಷೆ ಕುರ್ಕಿ ರಾಜರಾಜೇಶ್ವರಿ ಹರೀಶ್ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಸದಸ್ಯೆಯನ್ನು ಅಭಿನಂದಿಸಿ ಮಾತನಾಡಿದ ಮಾಲೂರು ಶಾಸಕ ಕೆ.ಎಸ್. ಮಂಜುನಾಥಗೌಡ, ಕೋಲಾರ ಎಪಿಎಂಸಿ ಏಷ್ಯಾದಲ್ಲೇ ದೊಡ್ಡ ಮಾರುಕಟ್ಟೆಯಾಗಿದೆ. ಇಲ್ಲಿ ಪ್ರತಿನಿತ್ಯ ವ್ಯಾಪಾರ-ವಹಿವಾಟು ಹೆಚ್ಚಾಗುತ್ತಿರುವುದರಿಂದ ಮಾರುಕಟ್ಟೆಯನ್ನು ವಿಸ್ತರಿಸಬೇಕಾಗಿದೆ. ಇದಕ್ಕಾಗಿ ಮಾರುಕಟ್ಟೆಗೆ ಹೊಂದಿಕೊಂಡಿರುವ ಸುಮಾರು 40 ಎಕರೆ ಜಮೀನುಗಳನ್ನು ಭೂಸ್ವಾಧೀನ ಪಡಿಸಿಕೊಂಡು ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೃಷಿ ಸಚಿವರ ಕೃಷ್ಣಬೈರೇಗೌಡ ಅವರಲ್ಲಿ ಮನವಿ ಮಾಡಲಾಗುವುದು. ಇದಕ್ಕೆ ಯಾವುದೇ ರೀತಿಯ ರಾಜಕೀಯ ಬಣ್ಣ ಕಟ್ಟಬಾರದು, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.ಆಡಳಿತ ಮಂಡಳಿ ರೈತರನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು.ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯೆಯಾಗಿ ಆಯ್ಕೆಗೊಂಡ ಕುರ್ಕಿ ರಾಜರಾಜೇಶ್ವರಿ ಹರೀಶ್ ಗೌಡ ಮಾತನಾಡಿ, ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಈಗ ಒದಗಿಸಿರುವ ಮೂಲಭೂತ ಸೌಲಭ್ಯಗಳ ಜೊತೆಗೆ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಹಾಗೂ 2012-13ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ 3 ಸಂಖ್ಯೆ ಪ್ಯಾಕೇಜ್ ಕಾಮಗಾರಿಗಳನ್ನು 90 ಲಕ್ಷ ರುಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ.2013-14 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ಈಗಿರುವ ರಸ್ತೆಗಳನ್ನು ಕಾಂಕ್ರಿಟ್ ರಸ್ತೆಗಳನ್ನಾಗಿ ಪರಿವರ್ತಿಸುವುದು, ಶ್ರಮಿಕರ ಭವನ, ಜಾನುವಾರುಗಳಿಗೆ ಶೆಡ್ ನಿರ್ಮಾಣ, ಸಾಮಾನ್ಯ ಶೌಚಾಲಯ ನಿರ್ಮಾಣ, 3 ಗೇಟುಗಳಿಗೆ ಆರ್ಚ್ ನಿರ್ಮಾಣ, ತನಿಖಾ ಠಾಣೆ ನಿರ್ಮಾಣ, ಆಡಳಿತ ಕಚೇರಿ ವಿಸ್ತರಣೆ ಮುಂತಾದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ಹೇಳಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೌಡೇಶ್ವರಿರಾಮು ಮಾತನಾಡಿದರು.ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಹೊಳಲಿ ಪ್ರಕಾಶ್, ಆರ್ಎಪಿ ನಾರಾಯಣಸ್ವಾಮಿ ಮಾತನಾಡಿದರು. ಚುನಾವಣಾಧಿಕಾರಿಯಾಗಿ ಬಿ.ಜಿ. ಶಿವಣ್ಣ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಮುಳಬಾಗಲಿನ ಆಲಂಗೂರು ಶಿವಣ್ಣ, ಮಾಲೂರು ಎಪಿಎಂಸಿ ಅಧ್ಯಕ್ಷ ಬಾಬಣ್ಣ, ಶ್ರೀನಿವಾಸಪುರದ ರಾಮಣ್ಣ, ಮುಳಬಾಗಿಲಿನ ಮಂಜುನಾಥ್, ಮೂರಾಂಡಹಳ್ಳಿ ಗೋಪಾಲ್, ಎಪಿಎಂಸಿ ನಿರ್ದೇಶಕರಾದ ಬಣಕನಹಳ್ಳಿ ನಟರಾಜ್, ಗೋಪಾಲಪ್ಪ, ರಾಮಚಂದ್ರಪ್ಪ, ಮಂಜುನಾಥ್, ಛತ್ರಕೋಡಿಹಳ್ಳಿ ಸುಧಾಕರ್ಗೌಡ, ರಾಮಕೃಷ್ಣೇಗೌಡ, ನರಸಾಪುರ ಗ್ರಾ.ಪಂ. ಉಪಾಧ್ಯಕ್ಷ ಹರೀಶ್ ಗೌಡ, ಮಾಲೂರು ನಂಜೇಗೌಡ, ಹನುಮಂತಪ್ಪ, ಕೆಂಚೇಗೌಡ, ಬಿ.ಎಂ. ಮುಬಾರಕ್, ಎಸ್.ಜಿ. ರಘು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

