ಕೋಲಾರ

ಕೈವಾರದಲ್ಲಿ ಮದ್ಯದಂಗಡಿ ತೆರವಿಗೆ ವಿರೋಧ

Published On :

ಚಿಂತಾಮಣಿ:  ಪವಿತ್ರ ಯಾತ್ರಾ ಸ್ಥಳವಾದ ಕೈವಾರ ಗ್ರಾಮದಲ್ಲಿ ಇರುವ ಮದ್ಯದ ಅಂಗಡಿಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಗ್ರಾಮ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತಿರುಗಿಬಿದ್ದಿರುವ ಘಟನೆ ಶನಿವಾರ ತಳಗವಾರ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೈವಾರ ಹೋಬಳಿಯ ತಳಗವಾರ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಯಲ್ಲಿ ನೂರಾರು ಸುತ್ತಮುತ್ತಲಿನ ಗ್ರಾಮಸ್ಥರು ಪವಿತ್ರ ಯಾತ್ರಾ ಸ್ಥಳವಾದ ಕೈವಾರ ಗ್ರಾಮದಲ್ಲಿ ಇರುವ ಮದ್ಯದ ಅಂಗಡಿಗಳನ್ನು ತೆರವುಗೊಳಿಸಿ ಅದನ್ನು ಬೇರೇ ಕಡೆಗೆ ಸ್ಥಳಾಂತರಿಸಬೇಕು. ಈ ಮೂಲಕ ಹಿಂದು ಧಾರ್ಮಿಕಥೆಗೆ ಧಕ್ಕೆ ಆಗದಂತೆ ಅಧಿಕಾರಿಗಳು ಕೂಡಲೇ ತೆರವುಗೊಳಿಸಬೇಕೆಂದು ತಾಲೂಕು ದಂಡಾಧಿಕಾರಿಗಳಾದ ಎಂ.ಎನ್.ಮಂಜುನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಳೆದ ಹಲವು ದಿನಗಳಿಂದ ವಿವಿಧ ಪ್ರಗತಿಪರ ಸಂಘಟನೆಗಳು ಮದ್ಯದ ಅಂಗಡಿಗಳನ್ನು ಕೈವಾರ ಗ್ರಾಮದಿಂದ ಎತ್ತಂಗಡಿ ಮಾಡಿ ತೆರವುಗೊಳಿಸಬೇಕೆಂದು ಆಗ್ರಹಿಸಿ ಅಬಕಾರಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಸ್ಥಳೀಯ ಅಧಿಕಾರಿಗಳು ಕುಮ್ಮಕ್ಕಿನಿಂದ ಮದ್ಯದ ವ್ಯಾಪಾರ ವಹಿವಾಟು ನಿರಮಂತರವಾಗಿ ನಡೆಯುತ್ತಿದೆ ಎಂದು ಸಭೆಯಲ್ಲಿ ಗ್ರಾಮಸ್ಥರು ಆರೋಪಿಸಿದರು.
ಮತ್ತೊಂದು ಕಡೆ ಎಂ.ಆರ್.ಪಿ. ದರಗಿಂತ ಹೆಚ್ಚುವರಿಯಾಗಿ ಜನರಿಂದ ಹಣವನ್ನು ವಸೂಲಿ ಮಾಡಿ ಹಲವು ಮಾಲೀಕರ ಜೊತೆ ಒಳಒಪ್ಪಂದ ಮಾಡಿಕೊಂಡು ತಿಂಗಳಿಗೆ ನೀಡುವ ಮಾಮೂಲಿಗೆ ಪಾತ್ರರಾಗಿದ್ದಾರೆಂದು ಸಭೆಯಲ್ಲಿ ಆರೋಪಿಸಿದರು.
ಕಾಟಾಚಾರಕ್ಕೆ ನಡೆದ ಸಭೆ
ಜನಸ್ಪಂದನಾ ಕಾರ್ಯಕ್ರಮಕ್ಕೆ ತಾಲೂಕು ದಂಡಾಧಿಕಾರಿಗಳು ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ಪೂರ್ವ ಸಿದ್ಧತೆ ನಡೆಸದೆ, ಗ್ರಾಮಾಂತರ ಪ್ರದೇಶಗಳಲ್ಲಿ ಟಾಂ ಟಾಂ ಹೊಡೆಸದೇ ಹಾಗೂ ಜನಸಾಮಾನ್ಯರಿಗೆ ಮಾಹಿತಿ ನೀಡದೆ ಇರುವುದರಿಂದ ತಾಲೂಕು ಆಡಳಿತ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಜಿಲ್ಲಾಧಿಕಾರಿ ಜನಸ್ಪಂದನಾ ಕಾರ್ಯಕ್ರಮ ಬಗ್ಗೆ ಕಾಟಾಚಾರಕ್ಕೆ ನಡೆಸದಂತೆ ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.