ಕೋಲಾರ

ಜಗಜೀವನರಾಂ 27ನೇ ಪುಣ್ಯತಿಥಿ

Published On :

ಚಿಕ್ಕಬಳ್ಳಾಪುರ: ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರು ಬಡವರ್ಗದ, ದಲಿತರ ಆಶಾಕಿರಣವಾಗಿದ್ದರು. ಇವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸರ್ಕಾರಿ ಶಿಕ್ಷಣ ಮಹಾವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಡಾ.ಕೋಡಿರಂಗಪ್ಪ ತಿಳಿಸಿದರು.  ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪ ಪ್ರಧಾನಿ ಜಗಜೀವನರಾಂ ರವರ 27ನೇಯ ಪುಣ್ಯತಿಥಿ ಆಚರಣೆಯಲ್ಲಿ ಮಾತನಾಡುತ್ತಿದ್ದರು.  ಜಗಜೀವನ್‌ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿದ್ದರು. ದೇಶದಲ್ಲಿ ಹಸಿರು ಕ್ರಾಂತಿಯೇ ಪ್ರಗತಿಗೆ ದಾರಿ ಎಂದೇ ನಂಬಿ ಅದಕ್ಕಾಗಿ ಶ್ರಮಿಸಿದ ವ್ಯಕ್ತಿ. ಇವರ ಆದರ್ಶಗಳು ನಮಗೆಲ್ಲಾ ದಾರಿದೀಪವಾಗಬೇಕೆಂದರು.  ಶಾಸಕ ಡಾ,ಕೆ. ಸುಧಾಕರ್, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ , ಜಿ.ಪಂ ಸಿಇಓ ಶೇಖರಪ್ಪ, ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ ಸಮರ್ಪಿಸಿದರು.  ತಾ.ಪಂ. ಅಧ್ಯಕ್ಷ ಓಬಳೇಶಪ್ಪ, ಉಪವಿಭಾಗಾಧಿಕಾರಿ ಶಾಂತಲಾ, ಡಿವೈಎಸ್‌ಪಿ ಎ.ಬಿ. ದೇವಯ್ಯ, ನಗರಸಭಾ ಆಯುಕ್ತ ರುದ್ರಮುನಿ, ರಾಜಾಕಾಂತ್  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.