ಕೇಂದ್ರದ ಜನ ವಿರೋಧಿ ನೀತಿಯಿಂದ ಜನ ಬೇಸತ್ತಿದ್ದಾರೆ: ನಾರಾಯಣಸ್ವಾಮಿ
ಕ.ಪ್ರ.ವಾರ್ತೆ, ಗೌರಿಬಿದನೂರು, ಜು.6
ಕೇಂದ್ರ ಸರ್ಕಾರದ ಆಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಯುಪಿಎ ಸರ್ಕಾರ ಅಧಿಕಾರ ಹಿಡಿದಾಗಿನಿಂದಲೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಲಿದೆ. ಇದರಿಂದ ಬಡವರು, ಮಧ್ಯಮ ವರ್ಗದವರ ಜೀವನ ಕಷ್ಟವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಮುನೇಶ್ವರ ಬಡಾವಣೆಯಲ್ಲಿ ಪಕ್ಷದ ತಾಲೂಕು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಬೇಕು. ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದರು.
ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವಿ.ಗೋಪಿನಾಥ್ ಮಾತನಾಡಿ, ತಾಲೂಕಿನಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಇದಕ್ಕೂ ಮುನ್ನ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅವರಿಗೆ ನಿರ್ಗಮಿತ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ ಅಧಿಕಾರ ಹಸ್ತಾಂತರ ಮಾಡಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ್, ನಾರಾಯಣರೆಡ್ಡಿ, ಪಕ್ಷದ ಮುಖಂಡರಾದ ಎಸ್.ರಮೇಶ್, ಜೆ.ವಿ.ಹನುಮೇಗೌಡ, ವೆಂಕಟರಾಮರೆಡ್ಡಿ, ಬಸಪ್ಪರೆಡ್ಡಿ, ಚಿನ್ನಪ್ಪರೆಡ್ಡಿ, ರಾಮಕೃಷ್ಣಾರೆಡ್ಡಿ, ವೇದಲವೇಣಿ ರಾಮು, ಮುರುಳೀಧರ್, ಸಾವಿತಮ್ಮ, ಪುರಸಭೆ ಸದಸ್ಯರಾದ ಜಿ.ಬಾಲಾಜಿ, ಮಾರ್ಕೆಟ್ ಮೋಹನ್, ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

