ಕೋಲಾರ

'ಪುರಾತನ ದೇಗುಲ ರಕ್ಷಣೆಗೆ ಆದ್ಯತೆ'

Published On :

ಬಾಗೇಪಲ್ಲಿ: ಪುರಾತನ ದೇವಾಲಯಗಳ ಸಂರಕ್ಷಣೆ ಮಾಡಲು ಹೆಚ್ಚು ಒತ್ತು ನೀಡಲಾಗುವುದು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.
ತಾಲೂಕಿನ ಪರಗೋಡು ಗ್ರಾ.ಪಂ. ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿ-7ರಲ್ಲಿ ಇರುವ ಪ್ರಸಿದ್ದ ಶ್ರೀ ಸುಂಕಲಮ್ಮ ದೇವಾಲಯದ ಮುಂಭಾಗದಲ್ಲಿ ನೂತನವಾಗಿ ಸುಮಾರು 56 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಜಗೋಪುರಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ರಾಜಮಹಾರಾಜರ ಹಾಗೂ ನಮ್ಮ ಪೂರ್ವಿಕರು ನಿರ್ಮಾಣ ಮಾಡಿದ್ದ ಪುರಾತನ ದೇವಾಲಯಗಳು ಇಂದು ಸರಿಯಾಗಿ ನಿರ್ವಹಣೆಯಿಲ್ಲದೆ ಶಿಥಿಲಾವಸ್ಥೆ ತಲುಪಿದ್ದು ಈ ದೇವಾಲಯಗಳನ್ನು ಸಂರಕ್ಷಣೆ ಮಾಡಲು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ದೊರೆಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಈ ಹಿಂದೆ ಜನಸಾಮಾನ್ಯರಲ್ಲಿ ಗುರು ಹಿರಿಯರು, ತಂದೆ, ತಾಯಿ ಹಾಗೂ ದೇವರನ್ನು ಭಕ್ತಿ ಭಾವದಿಂದ ನೋಡುತ್ತಿದ್ದರು. ಆದರೆ ಇಂದು ದೇವರು ಗುರು ಹಿರಿಯರ, ತಂದೆ ತಾಯಿಗಳ ಬಗ್ಗೆ ಗೌರವ ಕಡಿಮೆಯಾಗುತ್ತಿದೆ. ನಮ್ಮ ಪೂರ್ವಿಕರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆದರೆ ಸಮಾಜದಲ್ಲಿ ಜನರು ಸುಖ ಶಾಂತಿಯ ಜೊತೆಗೆ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತೆ. ಇಲ್ಲದಿದ್ದಲ್ಲಿ ಸಮಾಜದಲ್ಲಿ ಕೆಡಕುಗಳು ನಡೆದು ಜನರ ನೆಮ್ಮದಿಗೆ ಭಂಗವಾಗುವಂತಹ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಸಂದೇಹವಿಲ್ಲವೆಂದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಮುಖಂಡರಾದ ಕೆ.ಆರ್. ಅಂಜನಪ್ಪ, ಪ್ರಭಾಕರೆಡ್ಡಿ, ರಮೇಶ್, ಸುಬ್ಬಿರೆಡ್ಡಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.