ಕೋಲಾರ

'ಉತ್ತಮ ಆರೋಗ್ಯಕ್ಕಾಗಿ ಪರಿಸರ ಸಂರಕ್ಷಣೆ ಅಗತ್ಯ'

Published On :

ಕೋಲಾರ: ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾ ಮುಂತಾದ ಕಾಯಿಲೆಗಳ ನಿಯಂತ್ರಣಕ್ಕೆ ಜನತೆ ತಮ್ಮ ಮನೆ, ಸುತ್ತಮುತ್ತಲ ಪರಿಸರದಲ್ಲಿ ನೈರ್ಮಲ್ಯ ಕಾಪಾಡುವುದು ಅಗತ್ಯ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಶಶಿಕಾಂತ್ ತಿಳಿಸಿದರು.
ತಾಲೂಕಿನ ಕೆಂಬೋಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಮತ್ತು ಹದಿಹರೆಯದವರ ಆರೋಗ್ಯ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪರಿಸರದ ಬಗ್ಗೆ ತಿಳಿವಳಿಕೆ ಮೂಡಿಸುವ ಮೂಲಕ ಶಾಲೆಗಳಲ್ಲಿ ಹರಡುವ ರೋಗ ತಡೆಯಲು ಶಿಕ್ಷಕರು ಗಮನ ಹರಿಸಬೇಕೆಂದರು.
ಡಾ.ವೆಂಕಟೇಶ್‌ಬಾಬು, ಸಂಪನ್ಮೂಲ ವ್ಯಕ್ತಿಯಾಗಿದ್ದ ಮಹಿಳಾ ಜಾಗೃತಿ ವೇದಿಕೆಯ ಕಾರ್ಯದರ್ಶಿ ಮಮತಾ ರೆಡ್ಡಿ ಅವರು ಮಕ್ಕಳ ಹಕ್ಕುಗಳ ಬಗ್ಗೆ ಮತ್ತು ಪ್ರಸ್ತುತ ಸಮಾಜದಲ್ಲಿ ಮಕ್ಕಳ ಸ್ಥಿತಿಗತಿಗಳ ಕುರಿತು ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯ ಪಿ.ಚೌಡಮ್ಮ, ಶಿಕ್ಷಕ ಎಂ.ಬಿ. ಗಜೇಂದ್ರ, ಕಾರ್ಯಕ್ರಮದ ಆಯೋಜಕರಾದ ನಾಗೇಶ್ ರಾಜ್, ಶಶಿಕಲಾ, ಭಾರತಿ, ಲಕ್ಷ್ಮೀದೇವಿ ಇದ್ದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ನಾಗೇಶ್ ಎಲ್ಲರನ್ನು ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.