ಜಿಲ್ಲೆಯ ಹಿರಿಯ ಅಥ್ಲೆಟಿಕ್ ಕ್ರೀಡಾಪಟುಗಳ ಕಳಪೆ ಸಾಧನೆಗೆ ಅಸಮಾಧಾನ
ಕೋಲಾರ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 34ನೇ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಜಿಲ್ಲೆಯ 21 ಮಂದಿ ಹಿರಿಯ ಕ್ರೀಡಾಪಟುಗಳ ಕಳಪೆ ಸಾಧನೆಗೆ ಅಂತರ ರಾಷ್ಟ್ರೀಯ ಹಿರಿಯ ಕ್ರೀಡಾಪಟು ವಿ.ಮಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಜಿಲ್ಲೆಯಿಂದ ಪ್ರತಿನಿಧಿಸಿದ್ದ ಹಿರಿಯ ಕ್ರೀಡಾಪಟುಗಳು ಸರಿಯಾದ ತರಬೇತಿ, ಅಭ್ಯಾಸವಿಲ್ಲದೆ ಕ್ರೀಡಾಕೂಟದಲ್ಲಿ ಯಾವುದೇ ಪದಕ ಗಳಿಸಲು ಸಾಧ್ಯವಾಗಿಲ್ಲ.
ಮುಂದಿನ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಹಿರಿಯ ಕ್ರೀಡಾಪಟುಗಳು ಆಸಕ್ತಿಯಿಂದ ತರಬೇತಿ ಪಡೆದು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕೆಂದು ತಿಳಿಸಿದ್ದಾರೆ.
ಜಿಲ್ಲೆಯ ಕ್ರೀಡಾಪಟುಗಳು ಇನ್ನು ಮುಂದೆ ನಡೆಯಲಿರುವ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಶಕ್ತಿ ಮೀರಿ ಶ್ರಮಿಸಬೇಕೆಂದು ಕೋಲಾರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಕೆ.ಜಯದೇವ್ ಸಹ ಮನವಿ ಮಾಡಿದ್ದಾರೆ.
ಕಳೆದ ಜೂನ್ 27 ರಿಂದ ಜುಲೈ 1ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 34 ನೇ ಹಿರಿಯರ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅಂತರ ರಾಷ್ಟ್ರೀಯ ಕ್ರೀಡಾಪಟು ವಿ.ಮಾರಪ್ಪ (60)ಎತ್ತರ ಜಿಗಿತದಲ್ಲಿ ಬೆಳ್ಳಿ ಮತ್ತು ಉದ್ದ ಜಿಗಿತದಲ್ಲಿ ಕಂಚು ಗೆದ್ದು ಪದಕಗಳ ಗಳಿಕೆ ಸಂಖ್ಯೆಯನ್ನು 99ಕ್ಕೆ ಏರಿಸಿಕೊಂಡಿದ್ದು ಶತಕಕ್ಕೆ ಇನ್ನು ಒಂದು ಪದಕ ಮಾತ್ರ ಬಾಕಿ ಇದೆ. ಮಾರಪ್ಪನವರು ನೂರಕ್ಕೂ ಹೆಚ್ಚು ಪದಕಗಳನ್ನು ಗಳಿಸಲಿ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

