ಬಯಲುಸೀಮೆಗೆ ಬಜೆಟ್ ಹಣ: ಹಕ್ಕೊತ್ತಾಯ ಸಭೆ
ಚಿಂತಾಮಣಿ: ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಬರಪೀಡಿತ ಬಯಲು ಸೀಮೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಣ ಒದಗಿಸಬೇಕಾದ ವಿಷಯಕ್ಕೆ ಸಂಬಂಧಿಸಿ ಹಕ್ಕೊತ್ತಾಯ ಸಭೆ ಮತ್ತು ವಿಚಾರಣಾ ಸಂಕೀರ್ಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಯ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಪಟ್ಟಣದ ನಗರಸಭೆ ಸಭಾಂಗಣದಲ್ಲಿ ಭಾನುವಾರ ಕರ್ನಾಟಕ ಜನಶಕ್ತಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಮಿತಿ ವತಿಯಿಂದ ಬರಪೀಡಿತ ಬಯಲುಸೀಮೆ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಹಣ ಒದಗಿಸಬೇಕಾದ ಶಾಶ್ವತ ನೀರಾವರಿ ಯೋಜನೆಗಳು ಎಂಬ ವಿಷಯಕ್ಕೆ ಸಂಬಂಧಿಸಿ ಹಕ್ಕೊತ್ತಾಯ ಸಭೆ ಮತ್ತು ವಿಚಾರಣಾ ಸಂಕೀರ್ಣದಲ್ಲಿ ಹಿರಿಯ ನೀರಾವರಿ ಚಿಂತಕ ಮತ್ತು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ನಾರಾಯಣಸ್ವಾಮಿ, ನೀರಾವರಿ ಹೋರಾಟಗಾರ ಚೌಡಪ್ಪ, ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಉಪಾಧ್ಯಕ್ಷ ಮುನಿಸ್ವಾಮಿ, ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್, ಕನ್ನಡ ಉಪನ್ಯಾಸಕ ಎಂ.ಸುಬ್ಬರಾಯಪ್ಪ, ಜನಶಕ್ತಿ ರಾಜ್ಯ ಸಮಿತಿಯ ಕಿತ್ತಂಡೂರು ವೆಂಕಟರಾಮ ಹಾಗೂ ಸಿ.ಜೆ. ಗಂಗಪ್ಪ ಮಾತನಾಡಿದರು.
ಜುಲೈ ತಿಂಗಳಿನಲ್ಲಿ ಮಂಡನೆ ಆಗಲಿರುವ ಬಜೆಟ್‌ನಲ್ಲೇ ಹೊಸ ಸರ್ಕಾರ ಕೈಗೆತ್ತಿಕೊಳ್ಳಬೇಕಾದ ಒಣ ಬಯಲು ಸೀಮೆ ನೀರಾವರಿ ಯೋಜನೆಗಳ ಕುರಿತು ಚರ್ಚೆ ಆಗಬೇಕೆಂದು ಹಾಗೂ ಯೋಜನೆ ಶೀಘ್ರವೇ ಕಾರ್ಯರೂಪಕ್ಕೆ ಬರಬೇಕೆಂದು ವೇದಿಕೆಯಲ್ಲಿದ್ದ ಗಣ್ಯರು ಒಮ್ಮತದಿಂದ ಅವರವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಯ ಮುಖಂಡರಾದ ನಗರಸಭಾ ಸದಸ್ಯ ಡಿ.ಸಾದಪ್ಪ, ಕರವೇ ತಾಲೂಕು ಅಧ್ಯಕ್ಷ ಅಂಬರೀಷ್, ಜಯಕರ್ನಾಟಕ ಸಂಘಟನೆಯ ಬುಲೆಟ್ ರಮೇಶ್, ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷ ರಘುನಾಥರೆಡ್ಡಿ, ನಾರಾಮಾಕಲಹಳ್ಳಿ ಮುನಿರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಕೃಷ್ಣಪ್ಪ, ದಲಿತ ಸಂಘ ಸಮಿತಿಯ ಶ್ರೀರಂಗಪ್ಪ, ಶಾಶ್ವತ ನೀರಾವರಿ ಹೋರಾಟ ಸಮಿತಿಯ ನಾಗದೇನಹಳ್ಳಿ ನಾರಾಯಣಸ್ವಾಮಿ ಸೇರಿದಂತೆ ಇನ್ನೂ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

