ಡಿ ಗ್ರೂಪ್ ನೌಕರನ ಕಿರುಕುಳ; ಸಹಾಯಕಿ ಆತ್ಮಹತ್ಯೆಗೆ ಯತ್ನ
ಚಿಂತಾಮಣಿ: ಇರಗಂಪಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರನ ಕಿರುಕುಳದಿಂದ ಬೇಸತ್ತ ಅಲ್ಲಿನ ಕಿರಿಯ ಆರೋಗ್ಯ ಸಹಾಯಕಿಯೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಲೂಕಿನ ಇರಗಂಪಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಕಿರಿಯ ಆರೋಗ್ಯ ಸಹಾಯಕಿ ಕೆ.ಎನ್.ಚೌಡಮ್ಮ(24) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆಗೆ ಕಿರುಕುಳ ನೀಡಿದ ನೌಕರನನ್ನು ಅದೇ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಡಿಗ್ರೂಪ್ ನೌಕರ ಡಿ.ನಾರಾಯಣಸ್ವಾಮಿ ಎಂದು ಗುರುತಿಸಲಾಗಿದೆ.
ಕಸ ಗುಡಿಸುವ ವಿಚಾರದಲ್ಲಿ ಚೌಡಮ್ಮ ಮತ್ತು ನಾರಾಯಣಸ್ವಾಮಿ ನಡುವೆ ಮಾತಿಗೆ ಮಾತು ಬೆಳೆಯಿತು. ಆಗ ನಾರಾಯಣಸ್ವಾಮಿ ಚೌಡಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ. ಇದರಿಂದ ಕುಪಿತಗೊಂಡ ಆಕೆ ಆತನ ವರ್ತನೆ ವಿರುದ್ಧ ವೈದ್ಯಾಧಿಕಾರಿ ಡಾ.ರಂಗನಾಥ್ ಗಮನಕ್ಕೆ ತಂದಿದ್ದರು.
ರಾತ್ರಿ ಮನೆಗೆ ಬಂದ ಆಕೆ ಗಂಡನಿಗೆ ವಿಷಯ ತಿಳಿಸಿದ್ದಳು. ಈಸ ನಿಟ್ಟಿನಲ್ಲಿ ಸೋಮವಾರ ಸಂಬಂಧಪಟ್ಟವರಿಗೆ ದೂರು ನೀಡುವಂತೆ ಸೂಚಿಸಿದ್ದರು. ತಾಳ್ಮೆ ಕಳೆದುಕೊಂಡ ಆಕೆ ಮಧ್ಯರಾತ್ರಿ ಅಡುಗೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.
ಈ ವೇಳೆ ಅಡುಗೆ ಮನೆ ಪಾತ್ರೆಗಳು ಆಕೆಯ ಕಾಲು ಮತ್ತು ಕೈಗಳು ತಗಲಿ ಕೆಳಕ್ಕೆ ಬಿದ್ದಿತು. ಈ ಶಬ್ದಕ್ಕೆ ಎಚ್ಚರಗೊಂಡ ಗಂಡ ಕೂಡಲೇ ಆಕೆಯನ್ನು ರಕ್ಷಿಸಿ, ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ರವಾನಿಸಲಾಯಿತು. ಈಗ ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಗ್ರಾಮಾಂತರ ಠಾಣೆಯ ಪಿಪಿಐ ಕೃಷ್ಣಪ್ಪ ತಿಳಿಸಿದ್ದಾರೆ.
ಚೌಡಮ್ಮ ನೀಡಿದ ಹೇಳಿಕೆ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

