ಮುನಿಯಪ್ಪ ಸಾಧನೆ ಶೂನ್ಯ: ಶಾಸಕ ವೀರಯ್ಯ ವಾಗ್ದಾಳಿ
ಶಿಡ್ಲಘಟ್ಟ: ಕೇಂದ್ರ ಸಚಿವರಾಗಿ ಕೆ.ಹೆಚ್.ಮುನಿಯಪ್ಪ ಅವರು ಮಾಡಿದ ಸಾಧನೆ ಶೂನ್ಯ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಪಟ್ಟಣದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿ, ಎರಡು ಬಾರಿ ಕೇಂದ್ರ ಮಂತ್ರಿಯಾಗಿ ಜನರಿಗೆ ನೀಡಿರುವ ಕೊಡುಗೆ ಶೂನ್ಯ, ಕುತಂತ್ರದ ರಾಜಕಾರಣ ಮಾಡಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಿರುವುದು ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಬಹುದೊಡ್ಡ ಸಾಧನೆ ಎಂದು ವೀರಯ್ಯ ವ್ಯಂಗ್ಯವಾಡಿದರು.
ಒಡೆದು ಆಳುವ ನೀತಿ: ಕೆ.ಹೆಚ್.ಮುನಿಯಪ್ಪ ಅವರ ಒಡೆದು ಆಳುವ ನೀತಿಯಿಂದ ಕೋಲಾರ ಲೋಕಸಭಾ ಕ್ಷೇತ್ರದ ಆರು ವಿದಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದ್ದು, ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ವಿರುದ್ಧವೇ ಕುತಂತ್ರ, ಕೀಳು ರಾಜಕೀಯ ಮಾಡಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ನಿಜವಾದ ಬಣ್ಣಬಯಲಾಗಿದ್ದು, ಹೋದ ಕಡೆಯಲೆಲ್ಲಾ ಸುಳ್ಳು ಹೇಳುವ ಮೂಲಕ ಕ್ಷೇತ್ರದ ಜನರನ್ನು ಮರಳು ಮಾಡುತ್ತಿರುವ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ತಕ್ಕಪಾಠ ಕಲಿಸುವುದರಲ್ಲಿ ಸಂಶಯವೇ ಇಲ್ಲ ಎಂದು ಪ್ರತಿಪಾದಿಸಿದರು.
ತಮ್ಮ ವಿರುದ್ಧ ಅನಾಮಧೇಯ ಕರಪತ್ರ
ಮುದ್ರಿಸಿ ಕ್ಷುಲ್ಲಕ್ಕ ರಾಜಕಾರಣ ಮಾಡುವುದು ಅವರ ಘನತೆಗೆ ತರವಲ್ಲ, ಈ ನಿಟ್ಟಿನಲ್ಲಿ ಆರೋಪ-ಪ್ರತ್ಯಾರೋಪ ಏನೇ ಇರಲಿ ಸಾರ್ವಜನಿಕ ವೇದಿಕೆಯಲ್ಲಿ ಚರ್ಚಿಸಲು ತಾವು ಸಿದ್ಧರಿದ್ದು, ಆರೋಪ ಸಾಬೀತಾದಲ್ಲಿ ರಾಜಕೀಯ ನಿವೃತ್ತಿ ಹೊಂದುವುದಾಗಿ ವೀರಯ್ಯ ಸವಾಲು ಹಾಕಿದರು. ಪುರಸಭೆ ಮಾಜಿ ಅಧ್ಯಕ್ಷ ಜೆ.ವಿ.ಸದಾಶಿವ,
ತಾಲೂಕು ಬಿಜೆಪಿ ಅಧ್ಯಕ್ಷ ಸುರೇಂದ್ರಗೌಡ, ಮಾಜಿ ಅಧ್ಯಕ್ಷ ಮುನಿವೆಂಕಟಪ್ಪ, ಕೆಂಪರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

