ಕೋಲಾರ

ಐಎಸ್‌ಐ ಮಾನ್ಯತೆ; ಕಾಲಾವಕಾಶಕ್ಕೆ ಒತ್ತಾಯ

Published On :

ಕೋಲಾರ: ಜಿಲ್ಲೆಯಲ್ಲಿ ಪ್ಲೋರೈಡ್ ಯುಕ್ತ ನೀರನ್ನು ಮಾರಾಟ ಮಾಡುತ್ತಿರುವ ಕಂಪನಿಗಳು ಐಎಸ್‌ಐನಿಂದ ಮಾನ್ಯತೆ ಪಡೆಯಲು ಕನಿಷ್ಠ  6 ತಿಂಗಳು ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿ ಮಿನರಲ್‌ವಾಟರ್ ಕಂಪನಿಗಳ ಮಾಲೀಕರು ಮತ್ತು ವಿತರಕರು ಜಿಲ್ಲಾ ಆಡಳಿತವನ್ನು ಒತ್ತಾಯಿಸಿದ್ದಾರೆ.
ಸೋಮವಾರ ಈ ಸಂಬಂಧ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ವೆಂಕಟೇಶಮೂರ್ತಿ ಅವರಿಗೆ ಮನವಿ ಸಲ್ಲಿಸಿದ ಮಾಲೀಕರು ಮತ್ತು ವಿತರಕರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಸಂದರ್ಭದಲ್ಲಿ ಮಿನರಲ್‌ವಾಟರ್ ಕಂಪನಿಗಳಿಂದ ಶುದ್ಧ ಹಾಗೂ ಪ್ಲೊರೈಡ್‌ಯುಕ್ತ ನೀರನ್ನು ಕಡಿಮೆ ಬೆಲೆಗೆ ನೀಡಲಾಗುತ್ತಿದೆ. ಐಎಸ್‌ಐ ಮಾನ್ಯತೆ ಇಲ್ಲವೆಂಬ ಒಂದೇ ಕಾರಣಕ್ಕೆ ಕಂಪನಿಗಳನ್ನು ಬಂದ್ ಮಾಡಿಸಿರುವುದರಿಂದ ಕಂಪನಿಗಳಿಗೆ ಮಾತ್ರವಲ್ಲದೆ, ಜನತೆಗೂ ತೊಂದರೆ ಆಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡರು. ಮನವಿ ಸ್ವೀಕರಿಸಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ನಿವಾರಣೆ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದರು.
ಹೈ ಕೋರ್ಟ್ ಸೂಚನೆ ಮೇರೆಗೆ ಐಎಸ್‌ಐ ಮಾನ್ಯತೆ ಇಲ್ಲದ ಮಿನರಲ್‌ವಾಟರ್ ಕಂಪನಿಗಳ ವಿರುದ್ಧ ಜಿಲ್ಲಾ ಆರೋಗ್ಯ ಇಲಾಖೆ ಕ್ರಮಕ್ಕೆ ಮುಂದಾಗಿರುವುದರಿಂದ ಕಾಲಾವಕಾಶಕ್ಕಾಗಿ ಮಾಲೀಕರು ಹಾಗೂ ವಿತರಕರು ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.