ಕೋಲಾರ

ಬಿಜೆಪಿ ಸಂಘಟನೆ ಶಿಸ್ತು ಬದ್ಧವಾಗಿರಲಿ: ಶಿಡ್ಲಘಟ್ಟ ಮುಖಂಡರ ಪ್ರತಿಪಾದನೆ

Published On :

ಶಿಡ್ಲಘಟ್ಟ: ತಾಲೂಕು ಬಿಜೆಪಿ ನೂತನ ಅಧ್ಯಕ್ಷ ಸುರೇಂದ್ರಗೌಡ ಅವರಿಗೆ ಆಧಿಕಾರ ಹಸ್ತಾಂತರಿಸುವ ಸಭೆಯನ್ನು ಪಟ್ಟಣದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಈಗ ಕಷ್ಟಕಾಲದಲ್ಲಿದ್ದು, ಅವರನ್ನು ಮೇಲೆತ್ತುವ ಕಾರ್ಯವನ್ನು ಪಕ್ಷ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪಕ್ಷ ಬಲಪಡಿಸಲು ಹಲವು ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದರು.
ತಾಲೂಕು ಬಿಜೆಪಿ ಮಾಜಿ ಅದ್ಯಕ್ಷ ರಮೇಶ್ ಬಾಯಿರಿ ಮಾತನಾಡಿ, ಪಕ್ಷದಲ್ಲಿನ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಪಕ್ಷದ ಅಸ್ಚಿತ್ವ ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಎಂಎಲ್‌ಸಿ ಡಿ.ಎಸ್.ವೀರಯ್ಯ ಮಾತನಾಡಿ, ಮುಂದೆ ಹಲವು ಚುನಾವಣೆ ಬರುತ್ತಿದ್ದು. ಪಕ್ಷ ಬೆಳೆಸಲು ಕಾರ್ಯಕರ್ತರನ್ನು ಸಂಘಟನೆ ಮಾಡುವುದು ಹಾಗೂ ನೂತನ ಅಧ್ಯಕ್ಷ ಸುರೇಂದ್ರಗೌಡ ಅವರ ನೇತೃತ್ವದಲ್ಲಿ ತಂಡ ಕೆಲಸ ಮಾಡಲಿದೆ ಎಂದು ಹೇಳಿದರು.   ದೇಣಿಗೆ ಸಂಗ್ರಹ: ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ನೇತೃತ್ವದಲ್ಲಿ ತಾಲೂಕು ಬಿಜೆಪಿ ಮುಖಂಡರು, ಕಾರ್ಯಕರ್ತರು ಉತ್ತರಾಖಂಡ ನೆರೆ ಸಂತ್ರಸ್ತರಿಗಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ದೇಣಿಗೆ ಸಂಗ್ರಹಿಸಿದರು. ತಾಲೂಕು ಬಿಜೆಪಿ ಅಧ್ಯಕ್ಷ ಸುರೇಂದ್ರ ಗೌಡ, ಸದಾಶಿವ, ಮುನಿವೆಂಕಟಪ್ಪ, ಕೆಂಪರೆಡ್ಡಿ, ರಾಘವೇಂದ್ರ ಸೇರಿದಂತೆ ಮತ್ತಿತರೆ ಮುಖಂಡರು ಉತ್ತರಾಖಂಡ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸುವ ಸಮಯದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.