ರಯಾನ್ ಫೌಂಡೇಶನ್ನಿಂದ ನೋಟ್ಬುಕ್ ವಿತರಣೆ
ಚಿಕ್ಕಬಳ್ಳಾಪುರ: ರಯಾನ್ ಫೌಂಡೇಶನ್ ವತಿಯಿಂದ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿದ ಮಾತನಾಡಿದ ರಯಾನ್ ಫೌಂಡೇಶನ್ ಅಧ್ಯಕ್ಷ ಬಿ.ಎಸ್.ರಫೀವುಲ್ಲಾ, ಬಡತನದ ನಡುವೆ ಅನೇಕರು ಶಿಕ್ಷಣ ಪಡೆಯುತ್ತಿದ್ದಾರೆ. ಬಡ ಮಕ್ಕಳ ನೆರವಿಗೆ ಸ್ವಯಂ ಸೇವಾ ಸಂಸ್ಥೆಗಳು ಮುಂದಾಗಬೇಕು. ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಲು ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ತಮಗೆ ದೊರೆಯುವ ಸವಲತ್ತು ಸದುಪಯೋಗಪಡಿಸಿಕೊಂಡು ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು. ಈ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ ಒಳ್ಳೆಯ ಹೆಸರನ್ನು ಗಳಿಸಬೇಕು. ಜತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆರ್ಥಿಕವಾಗಿ ಹಿಂದುಳಿದ ಜನರ ಮುಂದೆ ಬರುವಂತೆ ಮಾಡಬೇಕೆಂದರು.
ರಯಾನ್ ಫೌಂಡೇಶನ್ ಉಪಾಧ್ಯಕ್ಷ ಮಹಮ್ಮದ್ ಉಸಾಮಾ, ಕಾರ್ಯದರ್ಶಿ ಎ.ಕೆ.ಫರೀದ್ ಬಾಬು, ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

