ಶ್ರೀನಿವಾಸ ಸಾಗರದ ವೆಂಕಟೇಶ್ವರಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ ಭೂಮಿಪೂಜೆ
ಚಿಕ್ಕಬಳ್ಳಾಪುರ: ಸುಮಾರು 800 ವರ್ಷಗಳ ಹಿಂದೆ ಪಲ್ಲವರಿಂದ ನಿರ್ಮಾಣಗೊಂಡ ಶ್ರೀನಿವಾಸ ಸಾಗರದ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ಪುನರ್ ನಿರ್ಮಾಣ ಮಾಡುವ ಜೀರ್ಣೋದ್ಧಾರ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಇಲ್ಲಿನ ದೇವಾಲಯ ಟ್ರಸ್ಟ್ ವತಿಯಿಂದ ಸುಮಾರು ರು. 60 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಶಾಸಕ ಡಾ.ಕೆ.ಸುಧಾಕರ್ ಮತ್ತಿತರರು ಸೋಮವಾರ ಭೂಮಿಪೂಜೆ ನೆರವೇರಿಸಿದರು.
4 ವರ್ಷಗಳಿಂದ ಕಾಮಗಾರಿ: ಶ್ರೀಕ್ಷೇತ್ರ ಶ್ರೀನಿವಾಸ ಸಾಗರದ ವೆಂಕಟರಮಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಕಳೆದ 4 ವರ್ಷಗಳಿಂದ ನಡೆಯುತ್ತಿದ್ದು, 30 ಅಡಿ ಎತ್ತರದ ಏಕ ಶಿಲೆಯಿಂದ ಮಾಡಿರುವ ಧ್ವಜ ಸ್ತಂಭವನ್ನು ಶುಕ್ರವಾರ ಸ್ಥಾಪನೆ ಮಾಡಲಾಯಿತು.
ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎಂ. ಶ್ರೀನಿವಾಸಮೂರ್ತಿ, ಸಂಚಾಲಕ ಎಂ.ಜಯರಾಮ್, ಸದಸ್ಯ ನಾಗರಾಜ್, ಲಕ್ಷ್ಮೀನರಸಪ್ಪ, ವಿಜಯ್ರೆಡ್ಡಿ
ಮತ್ತಿತರರು ಉಪಸ್ಥಿತರಿದ್ದರು.
ಪ್ರವಾಸಿ ಕ್ಷೇತ್ರವಾಗಿ: ಶ್ರೀನಿವಾಸ ಸಾಗರವನ್ನು ಪ್ರವಾಸಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಲು ವಿವಿಧ ಇಲಾಖೆ ಸಹಯೋಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆಗಸ್ಟ್ ಮೊದಲನೇ ವಾರದಲ್ಲಿ ದೇವಾಲಯ ಕುಂಭಾಭಿಷೇಕ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

