ಕೋಲಾರ

ಮುನಿಯಪ್ಪ ಹರ್ಷ: ಕೇಂದ್ರ ಗಣಿ ಸಚಿವರಿಗೆ ಮನವಿ

Published On :

ಕೋಲಾರ: ಹದಿಮೂರು ವರ್ಷಗಳ ಹಿಂದೆ ಮುಚ್ಚಲ್ಪಟ್ಟ ಕೆಜಿಎಫ್ ಚಿನ್ನದ ಗಣಿ ಕಂಪನಿಯನ್ನು ಗ್ಲೋಬಲ್ ಟೆಂಡರ್ ಮೂಲಕ ಪುನರಾರಂಭಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಕೇಂದ್ರ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸಚಿವರಾದ ಕೆ.ಎಚ್.ಮುನಿಯಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಅವರು ಈ ಸಂಬಂಧ ನವದೆಹಲಿಯಿಂದ ದೂರವಾಣಿ ಮೂಲಕ ಕನ್ನಡಪ್ರಭದೊಂದಿಗೆ ಮಾತನಾಡಿ, 2006 ಜುಲೈ 27 ರಂದು ಕಾಂಗ್ರೆಸ್ ನೇತೃತ್ವದ ಯುಪಿಎ-1 ಸರ್ಕಾರದ ಸಚಿವ ಸಂಪುಟದಲ್ಲಿ ಕೆಜಿಎಫ್ ಚಿನ್ನದ ಗಣಿಯನ್ನು ಗ್ಲೋಬಲ್ ಟೆಂಡರ್ ಮೂಲಕ ಪುನರಾರಂಭಿಸಲು ಕೈಗೊಂಡಿದ್ದ ನಿರ್ಣಯಕ್ಕೆ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠ ಮಾನ್ಯತೆ ನೀಡಿರುವುದು 150 ವರ್ಷಗಳ ಇತಿಹಾಸವುಳ್ಳ ಚಿನ್ನದ ಗಣಿಗೆ ಮರು ಜೀವ ಬಂದಂತಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಚಿನ್ನದ ಗಣಿಯನ್ನು ಕಾರ್ಮಿಕರೇ ಆರಂಭಿಸಲು ಮೊದಲ ಆದ್ಯತೆ ನೀಡಬೇಕು. ಗ್ಲೋಬಲ್ ಟೆಂಡರ್ ಮೂಲಕ ಗಣಿಯನ್ನು ನಡೆಸಲು ಅವಕಾಶ ಪಡೆಯುವವರೇ ಕಾರ್ಮಿಕರಿಗೆ ಸಲ್ಲಬೇಕಾದ ಪರಿಹಾರ ನೀಡಬೇಕು. ಆದಷ್ಟು ಬೇಗನೆ ಗಣಿಯನ್ನು ಆರಂಭಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಸೂಚನೆ ಆಶಾದಾಯಕವಾಗಿದ್ದು, ತಾವು ಬುಧವಾರ ನ್ಯಾಯಾಲಯದ ಆದೇಶದ ಪ್ರತಿಗಳನ್ನು ಸಂಗ್ರಹಿಸಿ ಸಂಬಂಧಪಟ್ಟ ಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯಾಲಯದ ಆದೇಶ ಪಾಲಿಸುವಂತೆ ಮನವಿ ಮಾಡುವುದಾಗಿ ಹೇಳಿದರು.ಕೋಲಾರ ಜಿಲ್ಲಾ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್ ಸಹ ಸುಪ್ರೀಂ ಕೋರ್ಟಿನ ಆದೇಶಕ್ಕೆ ಸಂತಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.