ಕೋಲಾರ

ಸುದ್ದಿ ಸಂಕ್ಷೇಪ

Published On :

ಇಂದು ಅನ್ನಭಾಗ್ಯ ಯೋಜನೆ ಚಾಲನೆ
ಕೋಲಾರ:  ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಕೆಜಿಗೆ 1 ರುಪಾಯಿಗೆ 1 ಕೆಜಿಯಂತೆ 30 ಕೆ.ಜಿ. ಆಹಾರಧಾನ್ಯ ವಿತರಿಸುವ ಅನ್ನಭಾಗ್ಯ ಯೋಜನೆ ಉದ್ಘಾಟನಾ ಸಮಾರಂಭವನ್ನು ಜು.10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್  ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವರು. ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.
ಬೋಧ ಗಯಾ ಸ್ಫೋಟ: ಪ್ರತಿಭಟನೆ
ಕೋಲಾರ: ಬೌದ್ಧರ ಪವಿತ್ರ ಕ್ಷೇತ್ರ ಬಿಹಾರದ ಬೋಧ ಗಯಾದಲ್ಲಿ ಭಾನುವಾರ ಸಂಭವಿಸಿದ ಸರಣಿ ಸ್ಫೋಟ ಪ್ರಕರಣವನ್ನು ಖಂಡಿಸಿ ಕರ್ನಾಟಕ ಸಮತಾ ಸೈನಿಕ ದಳ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಕೇಂದ್ರ ಸರ್ಕಾರ ಉಗ್ರರ ವಿಚಾರದಲ್ಲಿ ಮೃದು ಧೋರಣೆ ಅನುಸರಿಸುತ್ತಿರುವುದರಿಂದ ದೇಶದ ಜನತೆಗೆ ನೆಮ್ಮದಿ ಇಲ್ಲದಂತಾಗಿದೆ. ಅಲ್ಪಸಂಖ್ಯಾತರಾದ ಬೌದ್ಧರ ಮೇಲೆ ಉಗ್ರರು ದಾಳಿ ಮಾಡಲು ಯತ್ನಿಸಿರುವುದು ಖಂಡನೀಯ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕೇಂದ್ರ ಸರ್ಕಾರ ಎಚ್ಚರ ವಹಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಪ್ರತಿಭಟನೆಯ ನೇತೃತ್ವವನ್ನು ಕದಸಂಸ ಜಿಲ್ಲಾ ಸಂಚಾಲಕ ಮುನಿ ಆಂಜಿನೇಯ, ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಎನ್.ನಾರಾಯಣಪ್ಪ, ಮುಖಂಡರಾದ ಟಿ.ವಿಜಯಕುಮಾರ್, ಪಂಡಿತ್ ಮುನಿವೆಂಕಟಪ್ಪ, ವೆಂಕಟಾಚಲಪತಿ, ಹೂವಳ್ಳಿ ನಾಗರಾಜ್ ವಹಿಸಿದ್ದರು.
ಕರವೇ ಜಿಲ್ಲಾಧ್ಯಕ್ಷರ ನೇಮಕ: ಅಭಿನಂದನೆ
ಮಾಲೂರು: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ರಿಂದ ಸಂಘಟನೆಯ ಕೋಲಾರ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಮೇಡಿಹಾಳ ರಾಘವೇಂದ್ರ ಹಾಗೂ ಇತರ ಪದಾಧಿಕಾರಿಗಳನ್ನು ತಾಲೂಕು ಘಟಕ ಆತ್ಮೀಯವಾಗಿ ಅಭಿನಂದಿಸಿತು.    ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಗೌಡ ನೆಲ-ಜಲ-ಭಾಷೆಗೆ ಕುತ್ತು ಬಂದಾಗ  ನಿರಂತರವಾಗಿ ಹೋರಾಟ ಮಾಡುತ್ತಿರುವ ಮೇಡಿಹಾಳ ರಾಘವೇಂದ್ರರತಂಹ ವ್ಯಕ್ತಿತ್ವದ ಮುಖಂಡ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತೋಷ ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷೇಗೌಡ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಅನಂತಲಕ್ಷ್ಮಿ ಹಾಗೂ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲತಾಬಾಯಿರಾವ್  ಅವರನ್ನು ಅಭಿನಂದಿಸಲಾಯಿತು. ಎಸ್.ಎಂ.ರಾಜು, ಬಡಗಿ ಶ್ರೀನಿವಾಸ್, ಮುರಳೀಧರ್ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.