ಕೋಲಾರ

ಮಾಲೂರು ಬಿಜೆಪಿ ತಾ. ಅಧ್ಯಕ್ಷ ವೆಂಕಟೇಶ್

Published On :

ಕ.ಪ್ರ.ವಾರ್ತೆ   ಮಾಲೂರು   ಜು. 10
ಬಿಜೆಪಿ ತಾಲೂಕು ಅಧ್ಯಕ್ಷರಾಗಿ ಸೊಣ್ಣೂರು ವೆಂಕಟೇಶ್ ನೇಮಕಗೊಂಡಿದ್ದಾರೆ.
ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಮಾಧ್ಯಮ ಪ್ರಮುಖ ಹಾಗೂ ಬಿಬಿಎಂಪಿ ಸದಸ್ಯ ಶಿವುಕುಮಾರ್, ವಿಧಾನಸಭೆ ಚುನಾವಣೆ ವೇಳೆಯಲ್ಲಿ ಸಂಪೂರ್ಣ ನೆಲಕಚ್ಚಿದ್ದ ಬಿಜೆಪಿ ಪಕ್ಷವನ್ನು ಪುನಃ ಸಂಘಟಿಸಲು ಕಾರ್ಯಕರ್ತರ ಪಡೆ ಸಿದ್ಧವಾಗಿದೆ. ಈಗಾಗಲೇ ವಾರ್ಡ್ ಸೇರಿದಂತೆ ತಾಲೂಕಿನೆಲ್ಲಡೆ 33 ಸ್ಥಾನಿಕ ಸಂಸ್ಥೆ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದೆ. ಅವರ ಹಾಗೂ ಪಕ್ಷದ ಹಿರಿಯರ ಅಭಿಪ್ರಾಯದಂತೆ ಮುಂದಿನ 3 ವರ್ಷಗಳಿಗೆ ತಾಲೂಕು ಅಧ್ಯಕ್ಷರಾಗಿ ಜಿ.ಪಂ. ಮಾಜಿ ಅಧ್ಯಕ್ಷೆ ಮಂಜುಳಾ ಅವರ ಪತಿ ಸೊಣ್ಣೂರು ವೆಂಕಟೇಶ್ ಅವರನ್ನು ಅವಿರೋಧವಾಗಿ ನೇಮಕ ಮಾಡಲಾಗಿದೆ ಎಂದರು.
ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಸದಸ್ಯ ಬಿ.ಆರ್. ವೆಂಕಟೇಶ್, ಕಾರ್ಯದರ್ಶಿಯಾಗಿ ಕೆ.ಜಿ. ಗೋಪಾಲಕೃಷ್ಣ ರವರನ್ನು ನೇಮಿಸಲಾಗಿದೆ. ನೂತನ ಅಧ್ಯಕ್ಷರು ತಾಲೂಕಿನಲ್ಲಿ ಎಲ್ಲರ ಸಹಕಾರ ಪಡೆದು ಪಕ್ಷವನ್ನು ಶಕ್ತಿಯುತವಾಗಿ ಸಂಘಟಿಸಬೇಕು ಎಂದರು.
ನೂತನ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ತಮುಂಬರಲಿರುವ ಲೋಕಸಭೆ ಚುನಾವಣೆಗಾಗಿ ಪಕ್ಷವನ್ನು ಎಲ್ಲರ ಸಹಕಾರದೊಂದಿಗೆ ತಾಲೂಕಿನಲ್ಲಿ ಶಕ್ತಿಯುತವಾಗಿ ಸಂಘಟಿಸುವುದಾಗಿ ತಿಳಿಸಿದರು.
ತಾ.ಪಂ. ಮಾಜಿ ಅಧ್ಯಕ್ಷ ಗೋಪಾಲ್ ಗೌಡ ಮಾತನಾಡಿದರು. ದೇವರಾಜ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಜೈಶಂಕರ್, ರಂಗಪ್ಪ, ಪುರಸಭೆ ಸದಸ್ಯರಾದ ಸಿ.ಪಿ.ನಾಗರಾಜ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.