ಕೋಲಾರ

ರೈತರಲ್ಲಿ ಭರವಸೆ ಮೂಡಿಸಿದ ಮಳೆ

Published On :

ಕೋಲಾರ: ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕಂಗಾಲಾಗಿದ್ದ ರೈತರು ಬುಧವಾರ ಸಂಜೆ ಸುರಿದ ಮಳೆಯಿಂದ ಸಂತಸಗೊಂಡಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆ ಸುರಿದಿದ್ದು ಬಿತ್ತನೆಗಾಗಿ ತಯಾರಿ ನಡೆಸಿರುವ ರೈತರಿಗೆ ಇದರಿಂದ ಅನುಕೂಲವಾಗಲಿದೆ.
ಮರಳು ದಿಬ್ಬ ಕುಸಿದು ಇಬ್ಬರು ಸಾವು
ಕೋಲಾರ: ತಾಲೂಕಿನ ಬ್ಯಾಲಹಳ್ಳಿ ಸಮೀಪದ ಅಣ್ಣಿಹಳ್ಳಿಯ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಮರಳು ದಿಬ್ಬ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತರಾಗಿದ್ದಾರೆ. ವೆಂಕಟಮ್ಮ(65) ಹಾಗೂ ಎಲ್ಲಮ್ಮ (40) ಮೃತಪಟ್ಟ ನತದೃಷ್ಟ ಮಹಿಳೆಯರಾಗಿದ್ದು, ಕೂಲಿ ಕೆಲಸಕ್ಕೆ ಹೋಗಿದ್ದಾಗ ದುರಂತ ಸಂಭವಿಸಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮಗು ಸಾಯಿಸಿ ತಾಯಿ ಆತ್ಮಹತ್ಯೆ
ಕೋಲಾರ: ಸಂಸಾರದಲ್ಲಿ ಉಂಟಾದ ಮನಸ್ತಾಪದಿಂದ ಬೇಸತ್ತ ಗೃಹಿಣಿ ತನ್ನ 2 ವರ್ಷ ವಯಸ್ಸಿನ ಹೆಣ್ಣು ಮಗು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೀಲುಕೋಟೆಯಲ್ಲಿ ಬುಧವಾರ ನಡೆದಿದೆ. ಸಂತೋಷ್ ಎಂಬುವರ ಪತ್ನಿ ವೀಣಾ ತನ್ನ ಮಗಳು ದೀಪ್ತಿಯ ಕತ್ತು ಹಿಸುಕಿ ಕೊಲೆ ಮಾಡಿ ತಾನು ನೇಣು ಬಿಗಿದುಕೊಂಡು ಸತ್ತಿದ್ದಾರೆ. ಮೂರು ವರ್ಷಗಳ ಹಿಂದೆ ವೀಣಾ ಅವರನ್ನು ಮದುವೆಯಾಗಿದ್ದ ಸಂತೋಷ್ ಹಣಕ್ಕಾಗಿ ಪೀಡಿಸುತ್ತಿದ್ದರಿಂದ ಬೇಸತ್ತು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.