ಬಿಜೆಪಿ ಅಧ್ಯಕ್ಷರಾಗಿ ಮಾರ್ಕಂಡೇಗೌಡ
ಬಂಗಾರಪೇಟೆ: ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಬೂದಿಕೋಟೆಯ ಮಾರ್ಕಂಡೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷದ ಮುಖಂಡರು ತೊಡಗಿದ್ದು ಒಬ್ಬರಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದರಿಂದ ಅಧ್ಯಕ್ಷ ಆಯ್ಕೆಯನ್ನು ಜಿಲ್ಲಾಧ್ಯಕ್ಷರಿಗೆ ವಹಿಸಲಾಗಿತ್ತು.
ಎಲ್ಲಾ ಆಕ್ಷಾಂಕ್ಷಿಗಳನ್ನು ಸಮಾಧಾನಗೊಳಿಸಿ ಜಿಲ್ಲಾಧ್ಯಕ್ಷ ಎನ್. ಲಕ್ಷ್ಮಯ್ಯ ಅಧ್ಯಕ್ಷರಾಗಿ ಟಿಎಪಿಸಿಎಂಎಸ್ ಅಧ್ಯಕ್ಷ ಮಾರ್ಕಂಡೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಇವರ ಜೊತೆ ಪ್ರಧಾನ ಕಾರ್ಯದರ್ಶಿಗಳಾಗಿ ಐತಾಂಡಹಳ್ಳಿ ಅಮರೇಶ್ ಮತ್ತು ಮೋಹನ್ ಮೂರ್ತಿ ಅವರನ್ನೂ ನೇಮಕ ಮಾಡಲಾಗಿದೆ.
ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ ಕ್ಷೇತ್ರದಲ್ಲಿ ಪಕ್ಷ ಹಲವು ಕಾರಣಗಳಿಂದ ಸೊರಗಿದ್ದು ಅಲ್ಲದೆ ಮುಂದಿನ ವರ್ಷ ಲೋಕಸಭೆ ಚುನಾವಣೆ ಬರುವುದರಿಂದ ನೂತನ ಅಧ್ಯಕ್ಷರು ಎಲ್ಲ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಕೆಲ ಹಂತದಿಂದ ಸಂಘಟಿಸುವ ಜವಾಬ್ದಾರಿ ಇದೆ ಈ ಕಾರ್ಯದಲ್ಲಿ ಅಧ್ಯಕ್ಷರು ಯಶಸ್ಸು ಸಾಧಿಸುವರು ಎಂಬ ನಂಬಿಕೆ ಎಲ್ಲರಲ್ಲಿಯೂ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಮಾರ್ಕಂಡೇಗೌಡ ಕ್ಷೇತ್ರದಲ್ಲಿ ಪಕ್ಷ ಅಧಿಕಾರದಲ್ಲಿರುವ ಸಮಯದಲ್ಲಿ ಪಕ್ಷ ನನಗೆ ಪಕ್ಷವನ್ನು ಸಂಘಟಿಸಿ ಮತ್ತೆ ಅಧಿಕಾರ ಹಿಡಿಯುವಂತೆ ಹೊಸ ಜವಾಬ್ದಾರಿ ನೀಡಿದೆ ಹೈಕಮಾಂಡ್ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವೆ ಎಂದರಲ್ಲದೆ ಕೇಂದ್ರದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿ ಮಧ್ಯಮ ವರ್ಗದ ಜನರ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರ್ಕಾರನ್ನು ಕಿತ್ತು ಎಸೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಮತ್ತೆ ಬಿಜೆಪಿ ಪಕ್ಷ ಕೇಂದ್ರದಲ್ಲಿ ಆಡಳಿತಕ್ಕೆ ಬರುವಂತೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತಗಳು ಬರುವಂತೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಪುರಸಭೆ ಸದಸ್ಯರಾದ ಬಿ.ಸಿ. ಶ್ರೀನಿವಾಸಮೂರ್ತಿ, ವೇದಾವತಿ ಪ್ರಭಾಕರ್, ಮೋಹನ್ ಮೂರ್ತಿ,ಅಮರೇಶ್, ಕೀಲುಕುಪ್ಪ ಶ್ರೀನಿವಾಸ್, ಶ್ರೀನಿವಾಗೌಡ, ವೆಂಕಟೇಶ್ ಮೌರ್ಯ, ಶಂಕರನಾರಾಯಣರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

