'ಹಳ್ಳಿ ಜನರ ಸಮಸ್ಯೆ ತ್ವರಿತವಾಗಿ ಬಗೆಹರಿಸಿ'
ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದಲ್ಲಿನ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಾ.ಪಂ. ಸಭಾಂಗಣದಲ್ಲಿ ಪಿಡಿಒ ಮತ್ತು ಕಾರ್ಯದರ್ಶಿಗಳನ್ನೊಳಗೊಂಡ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಾಮಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶಸರ್ವಾಂಗೀಣ ಪ್ರಗತಿಯನ್ನು ಕಾಣುತ್ತದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಒತ್ತು ನೀಡಬೇಕು. ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು. ಗ್ರಾ.ಪಂ.ಗಳಿಗೆ ಸರ್ಕಾರ ಅನುದಾನ ನೀಡುತ್ತಿದೆ. ಆದರೆ, ಇದನ್ನು ಮಾತ್ರ ಅವಲಂಬಿಸದೇ ಜನರಿಂದ ತೆರಿಗೆಯನ್ನು ಸಮರ್ಪಕವಾಗಿ ವಸೂಲಿ ಮಾಡಿ ಅಭಿವೃದ್ಧಿ ಸಾಧಿಸಬೇಕೆಂದು ತಿಳಿಸಿದರು. ಅಲ್ಲದೇ ತೆರಿಗೆ ವಸೂಲಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದನ್ನು ತಿಳಿದು ಅಸಮಾಧಾನ ವ್ಯಕ್ತಪಡಿಸಿದರು. ತೆರಿಗೆ ವಸೂಲಿ ಮಾಡಲು ಗ್ರಾಮ ಪಂಚಾಯ್ತಿ ಆಂದೋಲನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಇದು ಪೆರೇಸಂದ್ರದಿಂದ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಾ.ಪಂ. ಅಧ್ಯಕ್ಷ ಓಬಳೇಶಪ್ಪ, ಸದಸ್ಯ ಕೃಷ್ಣಮೂರ್ತಿ, ಕಾರ್ಯ ನಿರ್ವಹಣಾಧಿಕಾರಿ ಶಶಿಕುಮಾರ್, ಪಿಆರ್ಇಡಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಗಣಪತಿ ಸಾಕ್ರೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

