ಕೋಲಾರ

ಮಾಜಿ ಸ್ವೀಕರ್ ರಮೇಶ್‌ಕುಮಾರ್ ಆಸ್ತಿ ಮರು ಸರ್ವೆಗೆ 'ಹೈ' ಆದೇಶ

Published On :

ಬೆಂಗಳೂರು:  ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಮಾಜಿ ಸ್ವೀಕರ್ ರಮೇಶ್‌ಕುಮಾರ್ ಅವರ ಆಸ್ತಿಯನ್ನು ಜಿಲ್ಲಾಧಿಕಾರಿಯ ಉಪಸ್ಥಿತಿಯಲ್ಲಿ ಮರುಸರ್ವೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಜಿಲ್ಲಾಧಿಕಾರಿಯ ಅನುಪಸ್ಥಿತಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಆರೋಪಿಸಿ ರಮೇಶ್‌ಕುಮಾರ್ ಸಲ್ಲಿಸಿದ್ದ ಅರ್ಜಿವಿಚಾರಣೆ ನಡೆಸಿದ ನ್ಯಾ.ಎ.ಎಸ್. ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ.  
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಲು ಗ್ರಾಮದಲ್ಲಿ 64.23 ಎಕರೆ ಮೀಸಲು ಅರಣ್ಯ ಭೂಮಿಯನ್ನು ರಮೇಶ್‌ಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಎ.ಟಿ. ರಾಮಸ್ವಾಮಿ ವರದಿ  ಬಹಿರಂಗಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಏ.30ರೊಳಗೆ ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ಕುಮಾರ್ ಅವರಿಗೆ ಆದೇಶಿಸಿದ್ದರು. ಆದರೆ, ಅದನ್ನು ಪಾಲಿಸದ ಹಿನ್ನೆಲೆಯಲ್ಲಿ ಭೂಮಿಯನ್ನು ವಶಪಡೆದುಕೊಂಡು ಇಲಾಖೆಯ ಫಲಕ ಹಾಕಲಾಗಿತ್ತು.
ಇದನ್ನು ಪ್ರಶ್ನಿಸಿ ರಮೇಶ್‌ಕುಮಾರ್ ಅರ್ಜಿ ಸಲ್ಲಿಸಿದ್ದರು. ಸರ್ವೆ ಪ್ರಕ್ರಿಯೆ ನಡೆಯುವಾಗಿ ಜಿಲ್ಲಾಧಿಕಾರಿಗಳು ಹಾಜರಿರಲಿಲ್ಲ. ಆದ್ದರಿಂದ ಇದು ಕಾನೂನುಬಾಹಿರ ಎಂದು ಆಕ್ಷೇಪಿಸಿ ರಮೇಶ್‌ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.