ಶಾಶ್ವತ ನೀರಾವರಿ ಜಾರಿಗೆ ಸದನದಲ್ಲಿ ಒತ್ತಾಯಿಸುವೆ; ಶಾಸಕ ವರ್ತೂರ್
ಕ.ಪ್ರ.ವಾರ್ತೆ ಕೋಲಾರ ಜು. 11
ಶುಕ್ರವಾರ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವ ಸಲುವಾಗಿ ಹೆಚ್ಚಿನ ಕಾಳಜಿ ವಹಿಸಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಯ ಜವಾಬ್ದಾರಿಯನ್ನು ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸುವುದಾಗಿ ಶಾಸಕ ಆರ್. ವರ್ತೂರು ಪ್ರಕಾಶ್ ತಿಳಿಸಿದರು.
ತಾಲೂಕಿನ ವಕ್ಕಲೇರಿಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟಾಚಲಯ್ಯ ಅವರನ್ನು ತಮ್ಮ ಬಣಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಡಾ. ಪರಮಶಿವಯ್ಯ ವರದಿ ಜಾರಿಗೆ ಅಗತ್ಯವಿರುವ ಅನುದಾನವನ್ನು ಬಜೆಟ್ನಲ್ಲೇ ಹೆಚ್ಚಾಗಿ ಘೋಷಿಸುವ ಮೂಲಕ ಯೋಜನೆ ಜಾರಿಗೆ ಸಹಕರಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.
ಅವಿಭಜಿತ ಜಿಲ್ಲೆಗಳ ಶಾಸಕರು ಸಹ ಶಾಶ್ವತ ನೀರಾವರಿ ವಿಚಾರದಲ್ಲಿ ಒಗ್ಗಟ್ಟಾಗಿ ಹೋರಾಟ ನಡೆಸುವುದಾಗಿ ಹೇಳಿದರಲ್ಲದೆ, ಈಗಾಗಲೇ ಕೋಲಾರ ಜಿಲ್ಲೆಯ ಶಾಸಕರು ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಶಾಶ್ವತ ನೀರಾವರಿ ಯೋಜನೆಗೆ ಸಂಕಲ್ಪ ಮಾಡಿರುವುದಾಗಿ ಹೇಳಿದರು.
ಕ್ಷೇತ್ರದಲ್ಲಿ ಈಗಾಗಲೇ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಮತ್ತು ವಿವಿಧ ಇಲಾಖೆಗಳ ಸಚಿವರ ಸಹಕಾರದೊಂದಿಗೆ ಮತ್ತಷ್ಟು ಅನುದಾನವನ್ನು ಕ್ಷೇತ್ರಕ್ಕೆ ತಂದು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬೆಗ್ಲಿ ಪ್ರಕಾಶ್, ತಾ.ಪಂ ಮಾಜಿ ಅಧ್ಯಕ್ಷೆ ರಮಾದೇವಿ ಚಲಪತಿ, ಗ್ರಾಪಂ ಅಧ್ಯಕ್ಷ ರಾಜಪ್ಪ, ಉಪಾಧ್ಯಕ್ಷೆ ಸಲ್ಮಾ ಮಸ್ತಾನ್, ಸದಸ್ಯರಾದ ರಾಘವೇಂದ್ರ, ಹರ್ಷವರ್ಧನ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ ಮುನಿಯಪ್ಪ, ಆಲಹಳ್ಳಿ ಶ್ರೀನಿವಾಸ್, ಚಿಕ್ಕಮುನಿಯಪ್ಪ, ಮುರಳಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

