ಎಂಪಿ ಚುನಾವಣೆ ಬಳಿಕ ಅನ್ನಭಾಗ್ಯ ಸ್ಥಗಿತ ಸಂಭವ: ಸಿ. ಗೌರಮ್ಮ
ಕೋಲಾರ: ಸಮಾಜವಾದ ಹಾಗೂ ಜನಪರ ಹೋರಾಟಗಳ ಮೂಲಕ ರಾಜಕೀಯ ರಂಗದಲ್ಲಿ ಅತ್ಯಂತ ಎತ್ತರಕ್ಕೇರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಸ್ವಾಗತಾರ್ಹ. ಆದರೆ, ಕೇಂದ್ರದಲ್ಲಿನ ಜನವಿರೋಧಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಲೋಕಸಭಾ ಚುನಾವಣೆ ನಂತರ ಕಡಿವಾಣ ಹಾಕಬಹುದೆಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಸಿ. ಗೌರಮ್ಮ ಅನುಮಾನ ವ್ಯಕ್ತಪಡಿಸಿದರು.
ಅವರು ಗುರುವಾರ ನಗರದ ಪತ್ರಕರ್ತರ ಭವನದಲ್ಲಿ ಜನವಾದಿ ಮಹಿಳಾ ಸಂಘಟನೆಯ ಕೋಲಾರ ತಾಲೂಕು ಮಟ್ಟದ 3ನೇ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಗೆಲ್ಲಬೇಕೆಂಬ ಉದ್ದೇಶದಿಂದ ಅಕ್ಕಿ ಯೋಜನೆ ಜಾರಿಗೆ ತರಲಾಗಿದ್ದು, ಚುನಾವಣೆ ಮುಗಿದ ಬಳಿಕ ಬಡವರ ಎಲ್ಲ ಯೋಜನೆಗಳ ಸಬ್ಸಿಡಿಗೆ ತತ್ತರಿ ಬೀಳುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದರು.
ಬಡವರಿಗಾಗಿ ರೂಪಿಸುವ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲದ ರೀತಿಯಲ್ಲಿ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕು, ಬದುಕಿಗಾಗಿ ಚಳವಳಿ ಮುಂದುವರೆಯದಿದ್ದರೆ ಬಡತನ ಇನ್ನಷ್ಟು ಹೆಚ್ಚಾಗುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

