ಕೋಲಾರ

ಜೀವ ಸಂಕುಲ ಉಳಿಯಲು ಜನಸಂಖ್ಯೆ ನಿಯಂತ್ರಣ ಅವಶ್ಯ'

Published On :

ಚಿಕ್ಕಬಳ್ಳಾಪುರ:  ಪ್ರಕೃತಿ ಆಸರೆಯಲ್ಲಿ ಬದುಕುತ್ತಿರುವ ನಾವು ಅತಿಯಾದ ಜನಸಂಖ್ಯೆಯಿಂದ ಪ್ರಕೃತಿ ಕೋಪಕ್ಕೆ ಬಲಿಯಾಗುತ್ತಿದ್ದೇವೆ. ಇದನ್ನರಿತು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಇನ್ನೂ ಹೆಚ್ಚಿಗೆ ಅನಾಹುತ ಎದುರಿಸಬೇಕಾಗುತ್ತದೆ ಎಂದು ಶಾಸಕ ಡಾ.ಕೆ.ಸುಧಾಕರ್ ಆತಂಕ ವ್ಯಕ್ತಪಡಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆಶ್ರಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅತಿ ಜನಸಂಖ್ಯೆಯಿಂದ ಎಲ್ಲರಿಗೂ ಉತ್ತಮಮಟ್ಟದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಸಂಪನ್ಮೂಲ ಕೊರತೆಯಿಂದ ತೊಂದರೆ ಅನುಭವಿಸುವಂತಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಅಧ್ಯಕ್ಷ ಚಿನ್ನಪ್ಪ, ಸರ್ಕಾರದ ಜತೆಗೆ ಸಾರ್ವಜನಿಕರು ಸಹ ಕೈ ಜೋಡಿಸಿ ಜನಸಂಖ್ಯೆ ಹೆಚ್ಚುತ್ತಿರುವುದನ್ನು ನಿಯಂತ್ರಿಸಬೇಕು. ಕುಟುಂಬ ಕಲ್ಯಾಣ ಯೋಜನೆ ಅಳವಡಿಸಿಕೊಳ್ಳಬೇಕೆಂದ ಅವರು, ವಿದ್ಯಾರ್ಥಿಗಳು ಜನಸಂಖ್ಯಾ ಸ್ಫೋಟದಿಂದ ಉಂಟಾಗುವ ಸಮಸ್ಯೆಗಳನ್ನು ಅರಿತು ಜನರಲ್ಲಿ ಜಾಗೃತಿ ಮೂಡಿಸಬೇಕೆಂದರು.
ಸಂಪನ್ಮೂಲ ವ್ಯಕ್ತಿ ಕೋಡಿ ರಂಗಪ್ಪ ಮಾತನಾಡಿದರು. ಜಿಪಂ ಸಿಇಒ ಬಿ.ಎಸ್. ಶೇಖರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಂಗಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎ.ಜಿ. ವಿಜಯಕುಮಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾಧಿಕಾರಿ ಡಾ.ಬಾಬುರೆಡ್ಡಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್, ಆರ್‌ಸಿಎಚ್ ಅಧಿಕಾರಿ ವೆಂಕಟೇಶಮೂರ್ತಿ ಮುಂತಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನಾ ಜನಸಂಖ್ಯೆ ಹೆಚ್ಚಳದ ವಿರುದ್ಧ ಜನಜಾಗೃತಿ ಜಾಥಾಗೆ ನಗರದ ನಂದಿ ರಂಗಮಂದಿರದಲ್ಲಿ ಜಿಪಂ ಅಧ್ಯಕ್ಷ ಚಿನ್ನಪ್ಪ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರಪ್ಪ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಜನಸಂಖ್ಯೆ ಹೆಚ್ಚಳ ವಿರುದ್ಧ ಜಾಗೃತಿ ಮೂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.