ಕೋಲಾರ

'ಅಪರಾಧ ತಡೆಗೆ ಸಹಕಾರ ಬೇಕು'

Published On :

ಚಿಂತಾಮಣಿ: ಅಪರಾಧ ಚಟುವಟಿಕೆಗಳನ್ನು ಕಡಿಮೆ ಮಾಡಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕರಿಸಿದರೆ ಮಾತ್ರ ಅಪರಾಧ ಪ್ರಕರಣಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕಡಿಮೆ ಮಾಡಲು ಸಾಧ್ಯವೆಂದು ಡಿವೈಎಸ್ಪಿ ಶೇಖರ್ ಹೇಳಿದರು.
ಪಟ್ಟಣದಲ್ಲಿನ ಆಶ್ರಯ ಬಡಾವಣೆ ಬಳಿ ಇರುವ ವೆಂಕಟಾದ್ರಿ ಕಾಲೇಜಿನಲ್ಲಿ ಮಂಗಳವಾರ ತಾಲೂಕು ಎಬಿವಿಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಮಹಿಳಾ ಕಾನೂನು ಸಂವಿಧಾನ ವಿಷಯಗಳನ್ನು ಒಳಪಟ್ಟಂತೆ ಚರ್ಚೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ ಪೊಲೀಸ್ ವ್ಯವಸ್ಥೆಯಲ್ಲಿ ಮಹಿಳೆ ಎಂಬ ವಿಷಯಕ್ಕೆ ಮಾತನಾಡಿ ಪ್ರಸ್ತುತ ಪೊಲೀಸ್ ವ್ಯವಸ್ಥೆ ಜನರಿಗೋಸ್ಕರ ಕೆಲಸ ನಿರ್ವಹಿಸುತ್ತಿದ್ದು, ಮಹಿಳೆಯರಿಗೋಸ್ಕರ ಪ್ರತ್ಯೇಕ ವ್ಯವಸ್ಥೆ ಮತ್ತು ಸಂರಕ್ಷಣೆ ನೀಡಿರುವ ಬಗ್ಗೆ ಸಭೆಯಲ್ಲಿ ವಿವರಿಸಿದರು. ಮುಖ್ಯ ಅತಿಥಿಯಾಗಿ ಅಬಕಾರಿ ಇಲಾಖೆಯ ಡಿ.ವೈ.ಎಸ್.ಪಿ ಲೋಕೇಶ್ಕುಮಾರ್, ವಕೀಲ ಬಿ.ಆರ್.ಶ್ರೀನಾಥ್ ಮಾತನಾಡಿದರು.  ಜಿಲ್ಲಾ ಸಂಚಾಲಕ ಮಂಜುನಾಥ್, ಸುರೇಶ್ ಹಾಗೂ ಶಿವಪ್ಪ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.