ಕೋಲಾರ

ಕೆಜಿಎಫ್: ಜೂಜು ಅಡ್ಡೆ ಮೇಲೆ ದಾಳಿ: 4 ಮಂದಿ ಸೆರೆ

Published On :


ಕೆಜಿಎಫ್: ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ. ರಾಮಕೃಷ್ಣರೆಡ್ಡಿ ಸೇರಿದಂತೆ ಇತರೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಆಂಡ್ರಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಗಡ್ಡೂರು ಗ್ರಾಮದ ಮುನಿವೆಂಕಟಪ್ಪ ಎಂಬುವರ ಜಮೀನಿನ ಹುಣಿಸೆ ಮರದ ಕಳಗೆ ಜೂಜಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ಐ ರಂಗಸ್ವಾಮಯ್ಯ ಮತ್ತು ಸಿಬ್ಬಂದಿ ದಾಳಿ ನಡೆಸಿ ಆಟಕ್ಕೆ ಪಣವಾಗಿಟ್ಟಿದ್ದ 5650 ನಗದು, 52 ಇಸ್ಪೀಟ್ ಎಲೆಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಇಂದು ಶ್ರೀನಿವಾಸ ಕಲ್ಯಾಣೋತ್ಸವ
ಕನ್ನಡಪ್ರಭ ವಾರ್ತೆ ಕೋಲಾರ ಜು.12
ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಶನಿವಾರ ಸಂಜೆ 6 ಗಂಟೆಗೆ ಲೋಕ ಕಲ್ಯಾಣಕ್ಕಾಗಿ  ಶ್ರೀನಿವಾಸ ಕಲ್ಯಾಣೋತ್ಸವ ಗ್ರಾಮಸ್ಥರ ಸಹಕಾರದಿಂದ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ತಿರುಮಲದ ಶ್ರೀನಿವಾಸ, ಪದ್ಮಾವತಿ, ಲಕ್ಷ್ಮೀದೇವಿಯರ ಮೂರ್ತಿ ಮೆರವಣಿಗೆ ನಡೆಯಲಿದೆ.  ಕಳೆದ ವರ್ಷ ಜಿಪಂ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಟಿ.ವಿ. ಕೃಷ್ಣಪ್ಪ, ಟಿ.ವಿ.ತಿಮ್ಮರಾಯಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.
ಈ ನಿಟ್ಟಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಮತ್ತಷ್ಟು ಸಂಭ್ರಮದಿಂದ ಕಲ್ಯಾಣೋತ್ಸವ ಆಚರಣೆಗೆ ಸಿದ್ದತೆ ನಡೆಸಿದ್ದು, ಬೆಂಗಳೂರಿನ ಶ್ರೀವಾರಿ ಫೌಂಡೇಷನ್ನ ಎಸ್.ವೆಂಕಟೇಶಮೂರ್ತಿ, ನಿರ್ವಹಣೆ ಉಸ್ತುವಾರಿ ವಹಿಸಲಿದ್ದಾರೆ.  ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾ ರ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.