ಜನಸಂಖ್ಯೆ ನಿಯಂತ್ರಣಕ್ಕೆ ಅರಿವು ಅವಶ್ಯ: ಡಾ.ಮಿತ್ರಣ್ಣ
ಕ.ಪ್ರ.ವಾರ್ತೆ ಗುಡಿಬಂಡೆ ಜು. 12
ದಿನೇ ದಿನೇ ಹೆಚ್ಚುತ್ತಿರುವ ಜನಸಂಖ್ಯೆಯಿಂದ ದುಷ್ಪರಿಣಾಮಗಳು ತೀವ್ರಗೊಂಡು ರಾಷ್ಟ್ರದ ಅಭಿವೃದ್ಧಿ ಕುಂಠಿತವಾಗುವುದರ ಜೊತೆಯಲ್ಲಿ ಸಮಸ್ಯೆ ಹೆಚ್ಚುತ್ತಿವೆ. ಇದನ್ನು ತಡೆಗಟ್ಟಲು ಜನಸಂಖ್ಯಾ ಸ್ಫೋಟದ ಬಗ್ಗೆ ಅರಿವು ಅಗತ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮಿತ್ರಣ್ಣ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ, ತಾಲೂಕು ಪಂಚಾಯತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.
ವಿಶ್ವದ ಜನಸಂಖ್ಯೆಯಲ್ಲಿ ಭಾರತ 2ನೇ ಸ್ಥಾನ ಹೊಂದಿದೆ. ಇದರಿಂದಾಗಿ ದೇಶದಲ್ಲಿ ಅತಿಯಾದ ಜನಸಂಖ್ಯೆಯಿಂದ ಆಹಾರ ಪದಾರ್ಥಗಳ ಕೊರತೆ, ವಸತಿ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತಿವೆ. ಇದರಿಂದ ಪ್ರತಿಯೊಬ್ಬರು ಸಣ್ಣ ಕುಟುಂಬ ಅಭಿವೃದ್ಧಿ ಸಂಕೇತ ಎಂಬ ಘೋಷಣೆಯಂತೆ ಜನಸಂಖ್ಯೆ ಹೆಚ್ಚುವಿಕೆಗೆ ಕಡಿವಾಣ ಹಾಕಬೇಕೆಂದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಜಿ.ವಿ. ವಿಶ್ವನಾಥ್ ಮಾತನಾಡಿ, ಒಂದು ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿ ಸಂಕೇತ ಅಲ್ಲಿನ ಉತ್ತಮ ಮಾನವ ಸಂಪನ್ಮೂಲವಾಗಿದೆ. ರಾಷ್ಟ್ರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಇಲ್ಲಿನ ನೈಸರ್ಗಿಕ ಸಂಪತ್ತು ಹಾಗೂ ಭೂ ಭಾಗ ಕಡಿಮೆ ಆಗಿರುವುದರಿಂದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾರಕವಾಗಿ ದೇಶದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದರು. ಇದೇ ವೇಳೆ ವಾಹಿನಿ ಅಭಿವೃದ್ಧಿ ಸಂಸ್ಥೆಯ ಯೋಜನಾ ನಿರ್ದೇಶಕ ಎಚ್.ಆರ್. ಸುರೇಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪ್ರಕಾಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಗ್ರಾಮ ಲೆಕ್ಕಿಗ ಲಕ್ಷ್ಮೀನಾರಾಯಣ ಜನಸಂಖ್ಯಾ ಸ್ಪೋಟದ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಲಾ ಮಕ್ಕಳು, ಸ್ವಯಂ ಸೇವಾ ಸಂಘಗಳ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪಟ್ಟಣದ ಮುಖ್ಯ ಬೀದಿಯಲ್ಲಿ ಜನಸಂಖ್ಯಾ ಸ್ಫೋಟದ ಬಗ್ಗೆ ಅರಿವು ಮೂಡಿಸುವ ಜಾಥ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

