ಗುಣಾತ್ಮಕ ಶಿಕ್ಷಣ ನೀಡಲು ಶಿಕ್ಷಕರಿಗೆ ಸಲಹೆ
ಕೋಲಾರ: ತಮ್ಮ 38 ವರ್ಷಗಳ ಶಿಕ್ಷಣ ಇಲಾಖೆಯ ಸೇವೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸಿದ್ದು, ತಮ್ಮ ಕಾರ್ಯಾವಧಿಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ ಕಾರ್ಯ ನಿರ್ವಹಿಸಿದ ತೃಪ್ತಿ ತಮಗಿದೆ ಎಂದು ನಿವೃತ್ತ ಇಸಿಒ ಹನುಮಂತಪ್ಪ ಹೇಳಿದರು.
ಅವರು ಬಂಗಾರಪೇಟೆ ತಾಲೂಕಿನ ಹುದುಕುಳ ಮತ್ತು ಕಾರಹಳ್ಳಿ ಕ್ಲಸ್ಟರ್ನ ಹುದುಕುಳ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದಿನ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅವರ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕೆಂದು ಕರೆ ನೀಡಿದರು.
ಬಾವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ದೇವಕುಮಾರ್ ಮಾತನಾಡಿ, ನನ್ನ ಸೇವಾವಧಿಯಲ್ಲಿ ಮಾಡಿರುವ ಕೆಲಸ ಪಾರದರ್ಶಕತೆಯಿಂದ ಕೂಡಿತ್ತು. ತಾನು ಬೇರು ಮಟ್ಟದಿಂದ ಉನ್ನತ ಮಟ್ಟದವರೆಗೆ ಬೆಳೆದ ಅನುಭವ ತಿಳಿಸಿದರು.
ನಿವೃತ್ತಿಯಾದರೂ ಸಹ ಶಿಕ್ಷಣ ಇಲಾಖೆ ಮತ್ತು ಶಿಕ್ಷಕರಿಗೆ ಹಾಗೂ ಸಾರ್ವಜನಿಕವಾಗಿ ತಮ್ಮ ಅಳಿಲು ಸೇವೆ ಮಾಡುವುದಾಗಿ ತಿಳಿಸಿದರು. ಸಮಾಲೋಚನೆ ಸಭೆಯಲ್ಲಿ ಶಿಕ್ಷಕರಿಗೆ ಆಡಳಿತಾತ್ಮಕ ವಿಚಾರಗಳ ಬಗ್ಗೆ ಬಿಆರ್ಪಿ ಕೆ.ಎನ್.ಮಂಜುನಾಥ ಸಂಪೂರ್ಣ ವಿವರಣೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ, ಶಿಕ್ಷಕರ ಸಂಘದ ಉಪಾಧ್ಯಕ್ಷ ಸಿದ್ದಪ್ಪ, ಕಸಾಪ ಅಧ್ಯಕ್ಷ ಅಶ್ವಥ್, ಬಿಆರ್ಪಿ ಕೆ.ಎನ್.ಮಂಜುನಾಥ ಮತ್ತು ಸಿಆರ್ಪಿ ಕಾರಹಳ್ಳಿ ವೃತ್ತದ ಸುಜಾತ, ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಜುಂಜನಹಳ್ಳಿ ಶಿಕ್ಷಕರಾದ ಎ.ರಮೇಶ್ ಇದ್ದರು.ಕಾರ್ಯಕ್ರಮದಲ್ಲಿ ಸುಜಾತ ನಿರೂಪಿಸಿ, ಕೆ.ಎನ್.ಮಂಜುನಾಥ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

