ಮೀನುಗಾರಿಕೆಯಿಂದ ಆರ್ಥಿಕ ಲಾಭ
ಕೋಲಾರ: ಮೀನುಗಾರಿಕೆಯಿಂದ ಆರ್ಥಿಕವಾಗಿ ಲಾಭ ಗಳಿಸಲು ಅವಕಾಶವಿರುವುದರಿಂದ ಗ್ರಾಮೀಣ ಜನತೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ನಾಗರಾಜು ತಿಳಿಸಿದರು.
2013 ಸಾಲಿನ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಥಮ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಮೀನುಗಾರಿಕೆ ತಜ್ಞರಾದ ಡಾ. ಹೀರಾಲಾಲ್ ಚೌಧರಿ ಮತ್ತು ಪ್ರೊ. ಆಲಿ ಕುನ್ನಿ ಅವರು 1957ರ ಜುಲೈ 10ರಂದು ಕೃತಕ ಮೀನು ಸಂತಾನೋತ್ಪತ್ತಿ ಕಾರ್ಯಕ್ರಮದಲ್ಲಿ ಯಶಸ್ವಿಯಾದರು. ಇದರಿಂದ ದೇಶದ ಒಳನಾಡು ಮೀನು ಉತ್ಪಾದನೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾದ ಪ್ರಯುಕ್ತ ಅವರ ಗೌರವಾರ್ಥವಾಗಿ ಪ್ರತಿ ವರ್ಷ ಮೀನು ಕೃಷಿಕರ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದರು. ದೇಶದಲ್ಲಿ ಮೀನಿನ ಬೇಡಿಕೆ ಮತ್ತು ಉತ್ಪಾದನೆಯಲ್ಲಿ ಬಹಳ ಅಂತರವಿರುವ ಕಾರಣ ಹೊಸ ತಂತ್ರಜ್ಞಾನ ಬಳಸಿ, ದೊಡ್ಡ ಗಾತ್ರದ ಮೀನು ಮರಿಗಳನ್ನು ಕೆರೆ ಅಂಗಳದಲ್ಲಿ ತೊಟ್ಟಿಗಳನ್ನು ನಿರ್ಮಿಸಿ ಉತ್ಪಾದನೆ ಮಾಡಿ ಕೆರೆಗೆ ಬಿತ್ತನೆ ಮಾಡುವ ಮುಖಾಂತರ ಮೀನಿನ ಉತ್ಪಾದನೆಯನ್ನು ಮತ್ತು ಮೀನು ಕೃಷಿಕರ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಕೋಲಾರ ತಾಲೂಕಿನ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಬ್ಬಣಿ ಶಂಕರ್, ಪೋಲೇನಹಳ್ಳಿ ಮೀನುಗಾರರ ಅಭಿವೃದ್ಧಿ ಮತ್ತು ಮಾರಾಟ ಸಹಕಾರ ಸಂಘದ ನಿರ್ದೇಶಕ ಮುನಿರಾಜು ಕಾರ್ಯಕ್ರಮದಲ್ಲಿ ತಮ್ಮ ಅನುಭವ ಹಂಚಿಕೊಂಡರು.
2013-14ನೇ ಸಾಲಿನ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ಇಲಾಖೆಯ ಸಹಾಯಕ ನಿರ್ದೇಶಕ ಪೆದ್ದಣ್ಣ ಸ್ವಾಗತಿಸಿ, ಡಿ. ಶಿವಶಂಕರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

