ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಅರಿಯಲಿ
ಕ.ಪ್ರ.ವಾರ್ತೆ, ಕೋಲಾರ, ಜು.14
ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜತೆಗೆ ಭಾರತವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕೆಂದು ನಗರಸಭಾ ಸದಸ್ಯ ಹಾಗೂ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಮುಬಾರಕ್ ಕರೆ ನೀಡಿದರು.
ನಗರದ ಪಿ.ಸಿ. ಬಡಾವಣೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀನಿವಾಸ ಮತ್ತು ಶ್ವೇತಾ ವಾಣಿಜ್ಯ ವಿದ್ಯಾಸಂಸ್ಥೆಗಳ ಪ್ರತಿಭಾ ಪುರಸ್ಕಾರ ಮತ್ತು ಶಾರದಾ ಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಾಯಿ, ತಂದೆ, ಗುರುಗಳು ಮತ್ತು ಜನ್ಮಭೂಮಿಗೆ ಗೌರವ ತರುವ ರೀತಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ದೇಶ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಚಂತನೆ ಮಾಡಿಬೇಕು ಎಂದರು.
ಡಾಲರ್ ವಿರುದ್ಧ ರುಪಾಯಿ ಮೌಲ್ಯ ಕುಸಿಯುತ್ತಿರುವ ಸಂದರ್ಭ ದೇಶದ ಪ್ರತಿಭಾವಂತರು ದೇಶಕ್ಕಾಗಿ ದುಡಿಯುವ ಬದಲು ವಿದೇಶಗಳಿಗೆ ಫಲಾಯನ ಮಾಡುತ್ತಿರುವುದು ಸರಿಯಲ್ಲ. ದೇಶವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಯುವ ಜನಾಂಗ ಕೈಜೋಡಿಸಬೇಕೆಂದರು.
ವಿದ್ಯಾರ್ಥಿಗಳು ತಾವು ಎಷ್ಟೇ ಎತ್ತರಕ್ಕೆ ಬೆಳೆದರೂ ಬೆಳೆದು ಬಂದ ಹಾದಿ ಮರೆಯಬಾರದು. ತಮ್ಮಂತೆ ಕಷ್ಟದಲ್ಲಿರುವವರಿಗೆ ನೆರವಾಗುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್ ಮಾತನಾಡಿ, ಇತ್ತೀಚಿಗೆ ಟೈಪಿಂಗ್ ವಿದ್ಯೆಯನ್ನು ಕಡೆಗಣಿಸಲಾಗುತ್ತಿದೆ. ಆದರೆ, ಬದುಕಿನಲ್ಲಿ ಯಾವುದೇ ವಿದ್ಯೆ ಕನಿಷ್ಠವಲ್ಲ, ಅದೇ ಶ್ರೇಷ್ಠವೂ ಅಲ್ಲ. ಆಸಕ್ತಿಯಿಂದ ಕಲಿಯುವ ಯಾವುದೇ ವಿದ್ಯೆ ಬದುಕಿಗೆ ಪೂರಕವಾಗಿರುತ್ತದೆ ಎಂದರು.
ಶ್ರೀನಿವಾಸ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ರಂಗನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಾಣಿಜ್ಯ ವಿದ್ಯಾ ಸಂಸ್ಥೆಯಿಂದ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ವಾಣಿಜ್ಯ ವಿದ್ಯೆ ಕಲಿಕೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ, ಎರಡೂ ವಾಣಿಜ್ಯ ಶಾಲೆಯ ಶ್ರೇಷ್ಟ ವಿದ್ಯಾರ್ಥಿಗಳನ್ನು ಗುರುತಿಸಿ ಸತ್ಕರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

