ಕೋಲಾರ

ಮೋದಿ ದೇಶದ ಉಜ್ವಲ ನಾಯಕ, ವಾಜಪೇಯಿ ಪ್ರತಿರೂಪ

Published On :

ಕ.ಪ್ರ.ವಾರ್ತೆ, ಚಿಕ್ಕಬಳ್ಳಾಪುರ, ಜು.14
ದೇಶದ ಉಜ್ವಲ ನಾಯಕ ಹಾಗೂ ವಾಜಪೇಯಿ ಅವರ ಪ್ರತಿರೂಪ ನರೇಂದ್ರ ಮೋದಿ. ಇವರ ನಾಯಕತ್ವದಲ್ಲೇ ಮುಂದಿನ ಲೋಕಸಭಾ ಚುನಾವಣೆ ಎದುರಿಸಿ, ಜಯಭೇರಿ ಬಾರಿಸಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಇಡುವಂತೆ ಮಾಡಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟರು.
ನಗರದ ವಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ರಾಜ್ಯಗಳಿಗೆ ಗುಜರಾತ್ ಮಾದರಿಯಾಗಿದೆ.  ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಕಂಡಿದೆ. ಇದಕ್ಕೆ ಮೂಲ ಕಾರಣ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆಡಳಿತ ಎಲ್ಲಾ ಕ್ಷೇತ್ರಗಳಿಗೆ ಹಾಕಿಕೊಟ್ಟ ಬುನಾದಿ ಎಂದರು.
ಮೋದಿ ಅವರು ಪ್ರಧಾನಿಮಂತ್ರಿಯಾದ ಕೂಡಲೇ ದೇಶಕ್ಕೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ವಾಜಪೇಯಿ ಅವರು ಪ್ರಧಾನಮಂತ್ರಿ ಆದಾಗ ದೇಶದಲ್ಲಿ ಶೇ.50 ರಷ್ಟು ರಾಷ್ಟ್ರೀಯ ಹೆದ್ದಾರಿಗಳು ಸುಧಾರಣೆ ಕಂಡಿದೆ. ದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ಆಗದಂತೆ ನೋಡಿಕೊಂಡ ಪ್ರಧಾನಿಯಾಗಿದ್ದರು. ಅವರ ಪ್ರತಿರೂಪದಲ್ಲೇ ನರೇಂದ್ರ ಮೋದಿ ದೇಶದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಕೇವಲ ಲಾಟರಿ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ ಹೊರತೂ ಅವರ ಸಾಧನೆಗಳಿಂದಲ್ಲ. ಕೇಂದ್ರದಲ್ಲಿ ಸಾಮಾನ್ಯ ಜನರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ.  ಕೇವಲ ಹಗರಣಗಳ ಸಾಲುಗಳಲ್ಲೇ ಮುಳುಗಿ ತೇಲುತ್ತಿದೆ. ಇದು ಕಾಂಗ್ರೆಸ್ ಪಕ್ಷದ ದೊಡ್ಡ ಸಾಧನೆಯಾಗಿದೆ. ಸುಳ್ಳಿನ ಸರದಾರ ವೀರಪ್ಪ ಮೊಯ್ಲಿ ಅವರು ಕಳೆದ 5 ವರ್ಷಗಳ ಹಿಂದೆಯೇ ನೀರಾವರಿ ಯೋಜನೆ ಬಗ್ಗೆ ಈ ಭಾಗದ ಪ್ರದೇಶಗಳಿಗೆ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಭರವಸೆಗಳನ್ನು ಭರವಸೆಗಳಾಗಿಯೇ ಉಳಿಸಿದ್ದಾರೆಯೆ ಹೊರತೂ ಇದುವರೆಗೂ ಇದರ ಕಡೆಗೆ ಗಮನ ನೀಡಿಲ್ಲ. ಇಂತಹ ನಾಯಕರಿಗೆ ಜನತೆಯೇ ತಕ್ಕ ಬುದ್ಧಿ ಕಲಿಸಬೇಕು ಎಂದರು. ಕೊರಟಗರೆ ವಿಧಾನಸಭಾ ಕ್ಷೇತ್ರದಲ್ಲಿ ಪರಮೇಶ್ವರ ಸೋಲುಂಡಕ್ಕೆ ಪ್ರಮುಖ ಕಾರಣ ಸಿದ್ದರಾಮಯ್ಯ. ಮೋದಿ ವಿರುದ್ಧ ಎಷ್ಟೇ ಅಪ್ರಚಾರ ಮಾಡಿದರೂ ಸಹಾ ಅದು ಬಿಜೆಪಿ ಪಕ್ಷಕ್ಕೆ ವರದಾನ ಆಗಲಿದೆಯೆ ಹೊರತೂ, ಯಾವುದೇ ರೀತಿಯ ಕೇಡುಗಳಾಗುವುದಿಲ್ಲ. ಮುಂದೆ ಪಂಚ ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ 4 ರಲ್ಲಿ ಬಿಜೆಪಿ ಸ್ಥಾನ ಗಳಿಸಲಿದೆ. ದೇಶದಲ್ಲಿ ನಡೆಯುತ್ತಿರುವ ಸರಣಿ ಬಾಂಬ್ ಸ್ಫೋಟ, ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದರು. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಆರ್ಥಿಕ ಬೆಂಬಲ ನೀಡುತ್ತಿದ್ದು, ಹಿಂದುಳಿದ ವರ್ಗದ ಜನರನ್ನು ಕಡೆಗಣಿಸುತ್ತಿದ್ದಾರೆ. ಇದರಿಂದ ಜಾತಿ ರಾಜಕಾರಣ ಮಾಡುತ್ತಿರುವುದು ನಾವೆಲ್ಲರೂ ನೋಡಬಹುದು. ಬಿಜೆಪಿ ಅಧಿಕಾರವಧಿಯಲ್ಲಿ ಜಾರಿಗೆ ತಂದಂತಹ ಭಾಗ್ಯಲಕ್ಷ್ಮಿ ಯೋಜನೆ, ಸೈಕಲ್ ವಿತರಣೆ ಸೇರಿದಂತೆ ಅನೇಕ ಯೋಜನೆಗಳನ್ನು ಈ ಬಾರಿ ಬಜೆಟ್‌ನಲ್ಲಿ ಕಡೆಗಣಿಸಿದೆ. ಮುಂದಿನ ಲೋಕಸಭಾ ಚುನಾವಣೆಯ ಲಾಭಕ್ಕಾಗಿ ತನಗೆ ಇಷ್ಟಬಂದ ರೀತಿಯಲ್ಲಿ ಬಜೆಟ್ ನೀಡಿದೆ. ಇನ್ನು ಯಡಿಯೂರಪ್ಪ ಅವರು ಬಿಜೆಪಿ ಕರೆ ತರುವ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ಅವರ ತೀರ್ಮಾನಕ್ಕೆ ನಾವು ಬದ್ದವಾಗಿರುತ್ತೇವೆ ಎಂದರು. ವಿಧಾನಪರಿಷತ್ತಿನ ಸದಸ್ಯ ಡಿ.ಎಸ್. ವೀರಯ್ಯ ಮಾತನಾಡಿ, ದೇಶದಲ್ಲಿರುವ ಅನೇಕ ರಾಜಕೀಯ ಪಕ್ಷಗಳಿಗಿಂತ ಬಿಜೆಪಿ ಪಕ್ಷ ವಿಭಿನ್ನವಾಗಿದೆ. ಬಿಜೆಪಿ ಪಕ್ಷಕ್ಕೆ ಮಾತ್ರ ಸಂಘಟನೆ ಮಾಡುವ ಶಕ್ತಿಯಿದೆ. ಪಕ್ಷದ ಬಲವರ್ಧನೆಗಾಗಿ ರಾಜ್ಯದ ಎಲ್ಲಾ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ಮಾಡಲಾಗುತ್ತದೆ. ವಿಧಾನಸಭಾ ಚುನಾವಣೆಯ ಮೊದಲೇ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಭರವಸೆಗಳು ಜಾತಿ ರಾಜಕಾರಣದ ಭರವಸೆಗಳಾಗಿದೆ ಎಂದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ರವಿನಾರಾಯಣರೆಡ್ಡಿ ಆಯ್ಕೆಯಾದರು. ಬೆಂಗಳೂರು ಗ್ರಾಮಾಂತರ ಬಿಜೆಪಿ ಹಾಲಿ ಅಧ್ಯಕ್ಷ ನಾರಾಯಣಸ್ವಾಮಿ, ಬಿಜೆಪಿ ಮುಖಂಡರಾದ ಕಾಂತರಾಜು, ರವೀಂದ್ರಜೀ, ಬಿ.ಸಿ.ನಾರಾಯಣಸ್ವಾಮಿ, ಎ.ವಿ.ಬೈರೇಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.  
ಮೋದಿ ಅವರು ಪ್ರಧಾನಿಮಂತ್ರಿಯಾದ ಕೂಡಲೇ ದೇಶಕ್ಕೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ವಾಜಪೇಯಿ ಅವರು ಪ್ರಧಾನಮಂತ್ರಿ ಆದಾಗ ದೇಶದಲ್ಲಿ ಶೇ.50 ರಷ್ಟು ರಾಷ್ಟ್ರೀಯ ಹೆದ್ದಾರಿಗಳು ಸುಧಾರಣೆ ಕಂಡಿದೆ. ದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ಆಗದಂತೆ ನೋಡಿಕೊಂಡ ಪ್ರಧಾನಿಯಾಗಿದ್ದರು. ಅವರ ಪ್ರತಿರೂಪದಲ್ಲೇ ನರೇಂದ್ರ ಮೋದಿ ದೇಶದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಲಿದ್ದಾರೆ
- ಕೆ.ಎಸ್. ಈಶ್ವರಪ್ಪ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.