'ಅರ್ಹ ಮತದಾರರ ಕೈಬಿಟ್ಟು ಶಿಕ್ಷಕರ ಸಂಘಕ್ಕೆ ಚುನಾವಣೆ ನಡೆಸಲು ಪಿತೂರಿ'
ಕೆಜಿಎಫ್: ಮುಂಬರುವ ಸರ್ಕಾರಿ ಶಿಕ್ಷಕರ ನೌಕರರ ಸಂಘದ ಚುನಾವಣೆಯಲ್ಲಿ ಅರ್ಹ ಮತದಾರರನ್ನು ಕೈಬಿಟ್ಟು ಚುನಾವಣೆ ನಡೆಸಲು ಈಗಿನ ಅಧ್ಯಕ್ಷ ಸುಬ್ರಮಣಿ(ಪಲ್ಲವಿ ಮಣಿ) ಪಿತೂರಿ ನಡೆಸಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮುಖಂಡರು ಆರೋಪಿಸಿದ್ದಾರೆ.
ಕಳೆದ 5 ವರ್ಷಗಳಿಂದ ಒಂದು ಕಾರ್ಯಕಾರಿ ಸಮಿತಿ ಸಭೆಯನ್ನು ಕೂಡ ನಡೆಸದೆ ಇರುವ ಬಗ್ಗೆ ಸಂಘವನ್ನು ಪ್ರಶ್ನಿಸಿದ್ದಕ್ಕೆ ಅಧ್ಯಕ್ಷರು ಪದಾಧಿಕಾರಿಗಳ ಹೆಸರಲ್ಲೇ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಟಿ. ಕೃಷ್ಣಪ್ಪ ಆರೋಪಿಸಿದ್ದಾರೆ.
ತಮ್ಮ ನೇತೃತ್ವದಲ್ಲಿ ಅರ್ಹ ಮುಖಂಡರನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದರು. ಬಹುತೇಕ ಸರ್ಕಾರಿ ನೌಕರರು ಈ ಸಂಬಂಧವಾಗಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಇದರಿಂದ ಭೀತಿಗೊಂಡ ಪಲ್ಲವಿಮಣಿ ತಮ್ಮ ಹೆಸರನ್ನೇ ಮತದಾರರ ಪಟ್ಟಿಯಿಂದ ಹೊರ ತೆಗೆಯಲಾಗಿದೆ ಎಂದು ಉಪನ್ಯಾಸಕ ಜಿ.ಪ್ರಭಾಕರ್ರೆಡ್ಡಿ ಆರೋಪಿಸಿದ್ದಾರೆ. ಕಳೆದ ತಿಂಗಳು ಚುನಾವಣೆ ಪ್ರಕ್ರಿಯೆ ಪ್ರಾರಂಭವಾದಾಗ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು ಅದನ್ನು ಜಿಲ್ಲಾಧ್ಯಕ್ಷರು ಅನಿಮೋದಿಸಿದ್ದರು. ಈ ಸಂದರ್ಭದಲ್ಲಿ ತಾವು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಸೋಲು ಅನುಭವಿಸುವುದು ಖಚಿತ ಎಂದು ಅರಿತ ಸುಬ್ರಮಣಿ ಈಗಿನ ಸಂಘದ ಜಂಟಿ ಕಾರ್ಯದರ್ಶಿ ಬಿ. ನಾಗರಾಜ್, ಉಪಾಧ್ಯಕ್ಷರಾದ ಸೀತಾರಾಮಪ್ಪ, ಎಂ.ಆರ್. ಮುರಳಿಕೃಷ್ಣ, ಗೋವಿಂದರಾಜು ಅವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಮುಂಬರುವ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

