ಕೋಲಾರ

ಬಾವಿಗೆ ಬಿದ್ದು ನವವಿವಾಹಿತೆ ಆತ್ಮಹತ್ಯೆ

Published On :

ಕ.ಪ್ರ.ವಾರ್ತೆ   ಕೆಜಿಎಫ್   ಜು. 15
ಬಾವಿಗೆ ಬಿದ್ದು ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯ ಗ್ರಾಮದಲ್ಲಿ ನಡೆದಿದೆ.  ಆಂಡ್ರಸನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಾಪುರ ಗ್ರಾಮದ ಚೊಕ್ರಬಂಡೆಹಳ್ಳಿ ಗ್ರಾಮದ ನಿವಾಸಿ ವೆಂಕಟೇಶಪ್ಪ ಎಂಬುವರ ಮಗಳಾದ ಮಂಗಮ್ಮ(20) ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಂಗಮ್ಮಳನ್ನು ಕಳೆದ 2 ತಿಂಗಳ ಹಿಂದೆ ತಮಿಳುನಾಡಿನ ಪಚ್ಚೂರು ನಿವಾಸಿ ಚಂದ್ರ(38) ಎಂಬುವರೊಂದಿಗೆ ಮದುವೆ ಮಾಡಿಸಲಾಗಿತ್ತು ಎನ್ನಲಾಗಿದೆ. ಭಾನುವಾರ ಮಂಗಮ್ಮ ತಮ್ಮ ಗಂಡ ಚಂದ್ರನೊಂದಿಗೆ ತವರು ಮನೆಗೆ ಬಂದಿದ್ದಳು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 7.30ಕ್ಕೆ ತಮ್ಮ ಅಣ್ಣನ ಮಗಳೊಂದಿಗೆ ಬಹಿರ್ದೆಸೆಗೆಂದು ಹೋಗಿದ್ದಾಗ ಮಂಗಮ್ಮ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ಭೇಟಿ ನೀಡಿದ ಆಂಡ್ರಸನ್‌ಪೇಟೆ ಪೊಲೀಸರು ಮೃತ ದೇಹವನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಮಂಗಮ್ಮ ಕಾಲು ಜಾರಿ ಬಾವಿಗೆ ಬಿದ್ದಳಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾಳಾ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಆಂಡ್ರಸನ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.