ರೈತರು ಆರ್ಥಿಕವಾಗಿ ಅಭಿವೃದ್ಧಿಹೊಂದಿ: ಮಂಜುನಾಥರೆಡ್ಡಿ
ಕ.ಪ್ರ.ವಾರ್ತೆ ಗೌರಿಬಿದನೂರು ಜು. 15
ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಲೀಟರ್ಗೆ 2 ರು.ನಂತೆ ಸಹಾಯಧನ ಘೋಷಿಸಿರುವುದರಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹಾಲು ಒಕ್ಕೂಟದ ಅಧ್ಯಕ್ಷ ಮಂಜುನಾಥರೆಡ್ಡಿ ಹೇಳಿದರು.
ತಾಲೂಕಿನ ಹುಣಸೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿ, ರೈತರು ಹಾಲು ಒಕ್ಕೂಟಗಳಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ರೀತಿಯಲ್ಲಿ ಹೈನುಗಾರಿಕೆಯನ್ನು ಮಾಡುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ತಿಳಿಸಿದರು. ಹುಣಸೇನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹೆಚ್.ಎನ್.ನರಸರೆಡ್ಡಿ ಮಾತನಾಡಿ 1992 ರಲ್ಲಿ ಸ್ಥಾಪಿತವಾದ ಸಂಘದಿಂದ ಈವರೆಗೂ ಸುಮಾರು 18 ಲಕ್ಷಕ್ಕೂ ಮೇಲ್ಪಟ್ಟು ಲಾಭಗಳಿಸಿದೆ. ಲಾಭದಲ್ಲಿ ರೈತರಿಗೆ, ಗ್ರಾಮದ ಜನತೆಗೆ ಅನುಕೂಲವಾಗುವಂತಹ ವಿವಿಧ ಸಮಾಜಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಎಸ್.ರಮೇಶ್ , ನಿರ್ದೇಶಕ ಎಸ್.ವಿ.ಸುಬ್ಬಾರೆಡ್ಡಿ, ವ್ಯವಸ್ಥಾಪಕ ಚಂದ್ರಮೋಹನ್, ಸಹಾಯ ವ್ಯವಸ್ಥಾಪಕ ವೆಂಕಟೇಶಗೌಡ, ಗೌರಿಬಿದನೂರು ಶೀಥಲ ಕೇಂದ್ರದ ವ್ಯವಸ್ಥಾಪಕ ಸುದರ್ಶನರೆಡ್ಡಿ, ವಿಸ್ತರಣಾಧಿಕಾರಿ ಶಂಕರಪ್ಪ, ರಾಮಕೃಷ್ಣಮೂರ್ತಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ರೈತರಿಗೆ ಬಹುಮಾನ ವಿತರಣೆ, ಬೋನಸ್ ವಿತರಣೆ, ಶಾಲಾ ಮಕ್ಕಳಿಗೆ ನೋಟ್ಬುಕ್ ವಿತರಣೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

