ಮುಷ್ಕರ ತಾತ್ಕಾಲಿಕ ಸ್ಥಗಿತಕ್ಕೆ ಕಾರ್ಮಿಕರ ನಿರ್ಧಾರ
ಗುಡಿಬಂಡೆ: ಪ.ಪಂ.ನ ಚುನಾಯಿತ ಸದಸ್ಯರು ನೀಡಿದ ಭರವಸೆ ಹಾಗೂ ಮನವಿಗೆ ಸ್ಪಂದಿಸಿದ ಪೌರಕಾರ್ಮಿಕರು ಕಳೆದ ಎಂಟು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಪ.ಪಂ.ನ ನೂತನ ಸದಸ್ಯ ರಿಯಾಜ್ಪಾಷ ಹಾಗೂ ನೌಕರರ ಜಿಲ್ಲಾ ಸಂಘದ ಪದಾಧಿಕಾರಿಗಳು ಸೋಮವಾರ ಮುಷ್ಕರ ನಿರತ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಮಾತನಾಡಿದ ಸದಸ್ಯ ರಿಯಾಜ್ಪಾಷ ಕಾರ್ಮಿಕರು ವೇತನ ವಿಳಂಬ ಪ್ರತಿಭಟಿಸಿ ಮುಷ್ಕರ ನಡೆಸುತ್ತಿರುವುದು ನ್ಯಾಯಯುತವಾದುದು. ಆದರೆ ಸರ್ಕಾರದ ಆದೇಶವೊಂದರ ಪ್ರಕಾರ ಸಮಸ್ಯೆ ಉಂಟಾಗಿದ್ದು, ಮೇಲಾಧಿಕಾರಿಗಳ ಜೊತೆ ಶೀಘ್ರ ಚರ್ಚೆ ನಡೆಸಿ ಪರಿಹಹಾರ ಕಲ್ಪಿಸಲಾಗುವುದು. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಮಿಕರು ಮುಷ್ಕರ ನಿಲ್ಲಿಸಿ ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕೆಂದು ಮನವಿ ಮಾಡಿದರು.
ಇಂದು ಸ್ಪಂದನ ಸಂಸ್ಥೆಯಿಂದ ಉದ್ಯೋಗ ಮೇಳ
ಗುಡಿಬಂಡೆ: ತಾಲೂಕಿನ ವಿದ್ಯಾವಂತ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸ್ಪಂದನ ಸಂಸ್ಥೆ ಜು.17ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. ಕೇಂದ್ರ ಸರ್ಕಾರದ ಎಸ್.ಆರ್.ಎಲ್.ಎಂ ಯೋಜನೆಯಡಿ ಪ.ಜಾತಿ, ಪ.ವರ್ಗ ಹಾಗೂ ಸಾಮಾನ್ಯ ವರ್ಗದ ಜಿಲ್ಲೆಯ ಎಲ್ಲಾ ನಿರುದ್ಯೋಗಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ. 18 ರಿಂದ 30 ವರ್ಷದೊಳಗಿನ ಅಭ್ಯರ್ಥ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರಿದ್ದು, ತಮ್ಮ ಇತ್ತೀಚಿನ ಎರಡು ಭಾವಚಿತ್ರ, ಬಿಪಿಎಲ್ ರೇಷನ್ ಕಾರ್ಡ್ಮತ್ತು ಶೈಕ್ಷಣಿಕ ದಾಖಲಾತಿಗಳೊಂದಿಗೆ ಪಟ್ಟಣದ ತಾ.ಪಂ.ಕಚೇರಿ ಆವರಣದಲ್ಲಿರುವ ಸಾಮರ್ಥ್ಯ ಸೌಧದ ಬಳಿ ಅಂದು ಬೆಳಿಗ್ಗೆ 9.30 ಗಂಟೆಗೆ ಹಾಜರಾಗಬೇಕೆಂದು ಸಂಸ್ಥೆಯ ಮುಖ್ಯಸ್ಥ ನರಸಿಂಹರಾಜು ತಿಳಿಸಿದ್ದಾರೆ. ಮಾಹಿತಿಗೆ ದೂ. ಸಂಖ್ಯೆ 9483094017 ಸಂಪರ್ಕಿಸಿ.
ಜಾತ್ರಾ ಮಹೋತ್ಸವ
ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಹೋಬಳಿ ದೊಡ್ಡದಾಳವೆಟ್ಟ ಗ್ರಾಮದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಜು. 18ರಂದು ಪ್ರಾರಂಭವಾಗಿ 22ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನಡೆಯಲಿದೆ ಎಂದು ದೇವಸ್ಥಾನದ ಮೂಲಗಳು ಪ್ರಕಟಣೆಯಲ್ಲಿ ತಿಳಿಸಿವೆ. 18 ರಂದು ಅಂಕುರಾರ್ಪಣ, ಭೇರಿತಾಡನ ಕೌತುಕ.19 ರಂದು ಕಲ್ಯಾಣೋತ್ಸವ, 20 ರಂದು ಬ್ರಹ್ಮರಥೋತ್ಸವ ನಡೆಯಲಿದ್ದು ಶಾಸಕ ಕೆ.ಎನ್.ರಾಜಣ್ಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

