'ಸರ್ಕಾರಿ ಯೋಜನೆ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಿ'
ಕ.ಪ್ರ.ವಾರ್ತೆ ಬಂಗಾರಪೇಟೆ ಜು. 15
ರಾಜ್ಯ ಸರ್ಕಾರ ಬಡವರ ಉದ್ಧಾರಕ್ಕಾಗಿ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದನ್ನು ಬಳಸಿಕೊಂಡು ಆರ್ಥಿಕವಾಗಿ ಬಲಿಷ್ಟರಾಗಬೇಕೆಂದು ಹುಲಿಬೆಲೆ ಪಂಚಾಯ್ತಿ ಅಧ್ಯಕ್ಷ ಶ್ರೀನಿವಾಸ್ ಹೇಳಿದರು.
ಹುಲಿಬೆಲೆ ಪಂಚಾಯ್ತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಾರ್ಡ್ ಸಭೆಗೆ ಚಾಲನೆ ನೀಡಿ ಮಾತನಾಡುತ್ತಾ ಪಂಚಾಯ್ತಿಗಳ ಮುಖಾಂತರವೇ ಹಳ್ಳಿಗಳನ್ನು ಮೂಲಭೂತ ಸೌಲಭ್ಯಗಳಿಂದ ಕಂಗೊಳಿಸಬೇಕೆಂಬ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪಂಚಾಯ್ತಿಗಳಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತಿದೆ. ವಾರ್ಡ್ ಸಭೆಗಳಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಗ್ರಾಮಗಳಲ್ಲಿ ಅಗತ್ಯವಾಗಿಬೇಕಾಗಿರುವ ಅನುಕೂಲಗಳ ಬಗ್ಗೆ ಸಭೆ ಗಮನಕ್ಕೆ ತಂದರೆ ಅಭಿವೃದ್ಧಿ ಪಡಿಸಲು ಅನುಕೂಲವಾಗಲಿದೆ ಎಂದರು. ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂದ ಬಳಿಕ ಗ್ರಾಮಗಳ ಚಿತ್ರಣವೇ ಬದಲಾಗುತ್ತಿದೆ ಈ ಯೋಜನೆ ಅಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿದ್ದು, ವಸತಿ ಯೋಜನೆಯಲ್ಲಿ ಅರ್ಹರಿಗೆ ಮನೆಗಳನ್ನು ಕಟ್ಟಿಕೊಡಲು ಫಲಾನುಭವಿಗಳ ಆಯ್ಕೆಗೂ ಈ ಸಭೆ ಸಹಕಾರಿಯಾಗಿದೆ ಎಂದರಲ್ಲದೆ ಪಂಚಾಯ್ತಿ ಆಡಳಿತವನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಪ್ರತಿ ಗ್ರಾಮದಲ್ಲಿಯೂ ಸಭೆಗಳನ್ನು ನಡೆಸಲಾಗುತ್ತಿದೆ. ಇದು ಸರ್ಕಾರದ ಆದೇಶ ಸಹ ಆಗಿದೆ ಎಂದರು. ವಾರ್ಡ್ ಸಭೆಗಳನ್ನು ನಡೆಸದ ಪಂಚಾಯ್ತಿಗಳಿಗೆ ಅನುದಾನ ಕಡಿತಗೊಳಿಸುವುದಾಗಿ ಇತ್ತೀಚೆಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಎಚ್ಚರಿಕೆ ನೀಡಿದ ಪರಿಣಾಮ ಕ್ಷೇತ್ರದಲ್ಲಿ ಹುಲಿಬೆಲೆ ಪಂಚಾಯ್ತಿ ಪ್ರಥಮವಾಗಿ ವಾರ್ಡ್ ಸಭೆಗಳನ್ನು ಹಮ್ಮಿಕೊಂಡಿದೆ. ಹುಲಿಬೆಲೆ ಪಂಚಾಯ್ತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ, ಅಬ್ಬಿಗಿರಿಹೊಸಹಳ್ಳಿ, ಸೇಲಂಗಿಡಿಸಲು, ತೊರಗನದೊಡ್ಡಿ, ರಾಮಾಪುರ, ಕಣವೇಕಲ್ಲು, ಕೊಪ್ಪ, ಹುಣಸನಹಳ್ಳಿ ಗ್ರಾಮಗಳಲ್ಲಿ ವಾರ್ಡ್ ಸಭೆ ನಡೆಯಿತು. ಉಪಾಧ್ಯಕ್ಷ ರಂಗನಾಥ್, ಸದಸ್ಯರಾದ ಚಂದ್ರಪ್ಪ, ಮಂಜುನಾಥ್, ಮಂಜು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಾಣಿ, ಕಾರ್ಯದರ್ಶಿ ಚೌಹಾನ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

