ಅಪಘಾತ: ವ್ಯಕ್ತಿ ಸಾವು
ಗೌರಿಬಿದನೂರು: ಮಂಗಳವಾರ ಸಂಜೆ ದೊಡ್ಡಕುರುಗೋಡು ಗ್ರಾಮದ ಸಮೀಪ ಕ್ಯಾಂಟರ್ ವಾಹನವು ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಹಿಂದೂಪುರ ತಾಲೂಕಿನ ಪರಿಗಿ ಮಂಡಲಂ ಬೀಚಗಾನಪಲ್ಲಿ ಗ್ರಾಮದವರಾದ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಲಿಂಗಪ್ಪ(40)ತೀವ್ರ ಸ್ವರೂಪದ ಗಾಯಗಳಾಗಿ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾನೆ. ಅದೇ ಗ್ರಾಮದವರಾದ ಸರಸ್ವತಿ(45)ಹಾಗೂ ತಾಲೂಕಿನ ನಗರಗೆರೆ ಗ್ರಾಮದ ಈಶ್ವರಮ್ಮ(20)ವೆಂಕಟೇಶ್ (30)ಗಾಯಾಳುಗಳಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಶ್ವರಮ್ಮನ 9ದಿನಗಳ ಹೆಣ್ಣು ಮಗು ಕ್ಷೇಮವಾಗಿದ್ದಾಳೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಹಿಳೆ ಆತ್ಮಹತ್ಯೆ
ಚಿಂತಾಮಣಿ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸೊಣ್ಣಶೆಟ್ಟಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ನಿವಾಸಿ ಗೀತಾ(21) ಎಂಬ ಗೃಹಿಣಿ ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಶವವನ್ನು ಶವಪರೀಕ್ಷೆಗಾಗಿ ಪಟ್ಟಣದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

