ಕೋಲಾರ

ಮತದಾರರ ಪಟ್ಟಿಯಲ್ಲಿ ನಾಪತ್ತೆ

Published On :

ಶ್ರೀನಿವಾಸಪುರ: ಇದೇ 22 ರಂದು ನಡೆಯಲಿರುವ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳ ಚುನಾವಣೆಯಲ್ಲಿ ಮತವನ್ನು ಚಲಾಯಿಸಬೇಕಾದ ಸುಮಾರು ಇಲಾಖೆಗಳ ಮತದಾರರನ್ನು ಮತದಾರರ ಪಟ್ಟಿಯಿಂದ ಕೈ ಬಿಟ್ಟಿರುವುದರಿಂದ ಕೆಲ ಸರ್ಕಾರಿ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನಲ್ಲಿ 25 ಇಲಾಖೆಗಳಿದ್ದು ಈಗ 35 ಪ್ರತಿನಿಧಿಗಳ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಶಿಕ್ಷಕರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಎರಡು ರಾಜಕೀಯ ಗುಂಪುಗಳಾಗಿ ತಮ್ಮ ಗೆಲವಿಗಾಗಿ ಪ್ರತಿಷ್ಠೆ ಪ್ರದರ್ಶಿಸುತ್ತಾ ಕೆಲವು ಇಲಾಖೆಗಳ ನೌಕರರನ್ನು ಮತದಾರರ ಪಟ್ಟಿಯಿಂದ ಉದ್ದೇಶ ಪೂರ್ವಕವಾಗಿ ಕೈ ಬಿಟ್ಟಿದ್ದಾರೆ ಎಂದು ಮತದಾರರ ಪಟ್ಟಿಯಲ್ಲಿ ಹೆಸರುಗಳಿಲ್ಲದ ನೌಕರರು ನೇರವಾಗಿ ಆರೋಪಿಸಿದ್ದಾರೆ.
ಪಡಿತರ ಚೀಟಿ ನವೀಕರಣ ದುಸ್ಥಿತಿ
ಶ್ರೀನಿವಾಸಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ 1 ರುಪಾಯಿಗೆ ಒಂದು ಕೆ.ಜಿ. ಅಕ್ಕಿಯಿಂದ ದೀನದಲಿತರು ಕುಟುಂಬ ಪಡಿತರ ಚೀಟಿಗಳನ್ನು ನವೀಕರಿಸಿಕೊಳ್ಳಲು,ಪಡಿತರ ಚೀಟಿಗಳನ್ನು ಪಡೆದುಕೊಳ್ಳುವುದಕ್ಕೆ ತಾ. ಕಚೇರಿಯಲ್ಲಿ ಹರಸಾಹಸ ಮಾಡಬೇಕಾದ ದುಸ್ಥಿತಿ ಒದಗಿದೆ ಎಂದು ಜನರ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.