ವ್ಯಕ್ತಿಯ ಕೈ ಕತ್ತರಿಸಿದ ಸಂಬಂಧಿಗಳು
ಚಿಂತಾಮಣಿ: ದಾಯಾದಿಗಳ ಭೂ ವಿವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೈ ಕತ್ತರಿಸಿ, ತಲೆ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಐಮರೆಡ್ಡಿಹಳ್ಳಿ ಗೇಟ್ ಬಳಿ ಮಂಗಳವಾರ ನಡೆದಿದೆ. ತಾಲೂಕಿನ ಮರಿನಾಯಕನಹಳ್ಳಿ ಗ್ರಾಮದ ನಿವಾಸಿ ಅಪ್ಪಿರೆಡ್ಡಿ ಎಂಬವರಿಗೂ, ಸಂಬಂಧಿ ಶ್ರೀರಾಮರೆಡ್ಡಿಯವರಿಗೂ ಹಲವು ವರ್ಷದಿಂದ ಜಮೀನಿನ ವಿಷಯಕ್ಕೆ ಆಗಾಗ ಘರ್ಷಣೆ ನಡೆಯುತ್ತಿತ್ತು. ಮಂಗಳವಾರ ಮಧ್ಯಾಹ್ನದ ವೇಳೆ ಪಟ್ಟಣದಿಂದ ಅಪ್ಪಿರೆಡ್ಡಿ ಗ್ರಾಮಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಮಾಡಿಕೇರಿ ಕ್ರಾಸ್ ಬಳಿಯಿಂದ ಮಾರಕಾಸ್ತ್ರಗಳು ಹಿಡಿದ ಶ್ರೀರಾಮರೆಡ್ಡಿ ಮಕ್ಕಳಾದ ಶಿವಾರೆಡ್ಡಿ, ಮಂಜುನಾಥ್, ಬೈರೇರೆಡ್ಡಿ ಮತ್ತಿತರರು ಐಮರೆಡ್ಡಿ ಗೇಟ್ ಬಳಿ ಮಚ್ಚು, ಲಾಂಗುನಿಂದ ಅಪ್ಪಿರೆಡ್ಡಿ ಕೈ ಕತ್ತರಿಸಿ ತಲೆ ಮತ್ತು ಕಾಲುಗಳಿಗೂ ಗಂಭೀರ ಗಾಯಗಳು ಮಾಡಿರುವುದಾಗಿ ಪೊಲೀಸರು ವಿವರಿಸಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಮುನ್ನೆಚ್ಚರಿಕ ಕ್ರಮವಾಗಿ ಗ್ರಾಮದಲ್ಲಿ ಬಂದೋಬಸ್ತ್ಕಲ್ಪಿಸಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಕೋಲಾರ ಆರ್ಎಲ್ ಜಾಲಪ್ಪ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ಕೇಸ್ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಾಳೆ ಸಾಮಾನ್ಯ ಸಭೆ
ಚಿಕ್ಕಬಳ್ಳಾಪುರ: ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಜು.18 ರಂದು ಬೆಳಗ್ಗೆ 11 ಗಂಟೆಗೆ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ವತಿಯಿಂದ ವಾರ್ಷಿಕ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ಅಧ್ಯಕ್ಷತೆ ವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

