ಹೋಂಡಾದಲ್ಲಿ ಸ್ಥಳೀಯರ ಕಡೆಗಣನೆ; ಆರೋಪ
ಚಿಂತಾಮಣಿ: ಕನ್ನಡ ನೆಲದಲ್ಲಿ ಕನ್ನಡಿಗರನ್ನು ಕಡೆಗಣಿಸಿ ಪರರಾಜ್ಯದವರಿಗೆ ಉದ್ಯೋಗ ನೀಡುತ್ತಿರುವ ಹೋಂಡಾ ಕಂಪನಿಯ ಧೋರಣೆಯನ್ನು ಖಂಡಿಸಿ ಸೋಮವಾರ ಚಿಕ್ಕಬಳ್ಳಾಪುರ ಕರವೇ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿತು.
ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಪ್ರಾರಂಭವಾಗಿರುವ ಹೋಂಡಾ ಕಂಪನಿ ಮತ್ತು ಇತರೆ ಕಂಪನಿಗಳಲ್ಲಿ ಎಲ್ಲ ಹಂತದ ಉದ್ಯೋಗಗಳನ್ನು ಸ್ಥಳೀಯ ಕನ್ನಡಿಗರಿಗೆ ನೀಡುವಂತೆ ಒತ್ತಾಯಿಸಿ ಚಲೋ ನರಸಾಪುರ ಚಳುವಳಿಗೆ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.
ಕರವೇ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಮಾತನಾಡಿ, ಕೋಲಾರ ತಾಲೂಕಿನ ವ್ಯಾಪ್ತಿಯ ಕೈಗಾರಿಕಾ ಪ್ರದೇಶಕ್ಕೆ ಸರ್ಕಾರ ಈ ಭಾಗದ ರೈತರ ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಂಡಿದೆ. ಹೋಂಡಾ ಕಂಪನಿ ಸ್ಥಾಪನೆಯಾಗಿ ಕಾರ್ಯಾರಂಭವಾಗುತ್ತಿರುವುದು ಒಳ್ಳೆಯದೆ ಆಗಿದೆ. ಆದರೆ ಭೂಮಿ ಕಳೆದುಕೊಂಡ ಸಾವಿರಾರು ನಿರುದ್ಯೋಗಿಗಳಿಗೆ ಕಾರ್ಖಾನೆಯಲ್ಲಿ ಉದ್ಯೋಗ ನೀಡುವುದಾಗಿ ಸರ್ಕಾರದ ಜೊತೆ ಮಾಡಿಕೊಂಡಿರುವ ಒಪ್ಪಂದದಲ್ಲಿ ಹೋಂಡಾ ಕಂಪನಿ ತಿಳಿಸಿದೆ. ಆದರೆ ಸ್ಥಳೀಯ ಕನ್ನಡಿಗರನ್ನು ಕಡೆಗಣಿಸಿ ಪರರಾಜ್ಯದವರಿಗೆ ಉದ್ಯೋಗ ಅವಕಾಶಗಳನ್ನು ನೀಡುತ್ತಿದೆ. ಇದನ್ನು ವಿರೋಧಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಲು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೆರಳುತ್ತಿರುವುದಾಗಿ ಹೇಳಿದರು.
ಕರವೇ ತಾಲೂಕು ಅಧ್ಯಕ್ಷ ಅಂಬರೀಶ್, ಮುಖಂಡರಾದ ಶಬೀರ್‌ಪಾಷ, ನಾರಾಯಣಸ್ವಾಮಿ, ಮಾ.ಷ.ಚಂದ್ರಶೇಖರ್, ಸಿ.ಡಿ.ಶಂಕರ್, ಕೃಷ್ಣ, ಶ್ರೀಧರ್ ಸೇರಿದಂತೆ ನೂರಾರು ಜನರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

