ಕೋಲಾರ

'ಅರ್ಹ ಫಲಾನುಭವಿಗಳ ಆಯ್ಕೆಗೆ ಸಹಕರಿಸಿ'

Published On :

ಕ.ಪ್ರ.ವಾರ್ತೆ   ಮಾಲೂರು   ಜು. 17
ಗ್ರಾಮಗಳ ಅಭಿವೃದ್ಧಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಗ್ರಾಮಸ್ಥರು ರಾಜಕೀಯೇತರವಾಗಿ ಸಹಕರಿಸಬೇಕು ಎಂದು ಚಿಕ್ಕಕುಂತೂರು ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ದೇವರಾಜ್ ತಿಳಿಸಿದರು.
ತಾಲೂಕಿನ ಚಿಕ್ಕಕುಂತೂರು ಪಂಚಾಯ್ತಿಯಲ್ಲಿ ಅಧ್ಯಕ್ಷೆ ಲಕ್ಷಮ್ಮ ರವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ 2013-14 ನೇ ಸುತ್ತಿನ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತ, ಸರ್ಕಾರದ ಯೋಜನೆಗಳ ಬಗ್ಗೆ ಜನತೆ ಸಹ ಮಾಹಿತಿ ಪಡೆದುಕೊಳ್ಳುವುದು ಅವಶ್ಯ ಎಂದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಗಳ ಯೋಜನೆಗಳ ಬಗೆ ಮಾಹಿತಿ ನೀಡಿದರು. ಮಾಜಿ ತಾಲೂಕು ಬೋರ್ಡ್ ಅಧ್ಯಕ್ಷ ಭುವನಹಳ್ಳಿ ಚೆನ್ನಪ್ಪ ಮಾತನಾಡಿದರು.
ಪಂಚಾಯ್ತಿ ಉಪಾಧ್ಯಕ್ಷೆ ಆರ್.ಗೀತಾ, ಹಿರಿಯ ಸದಸ್ಯ ಭುವನಹಳ್ಳಿ ಅಬ್ಬಯಪ್ಪ, ಚಿಕ್ಕಕುಂತೂರು ನಾಗರಾಜು ರೆಡ್ಡಿ, ಎ.ನಾಗವೇಣಿ, ಎಂ.ಪುಪ್ಬ, ಶಂಕರಪ್ಪ, ರಮೇಶ್, ಡಿ.ಆರ್.ವೆಂಕಟೇಶಪ್ಪ, ನಂಬಿಗಾನಹಳ್ಳಿ ವೆಂಕಟೇಶಪ್ಪ, ಹಿಜುವನಹಳ್ಳಿ ಮಮತ, ಎಂ.ವಿಜಿಕುಮಾರ್, ನಿದರಮಂಗಲ ತಿಮ್ಮಯ್ಯ, ನೋಡಲ್ ಅಧಿಕಾರಿ ಹೆಚ್.ಎನ್.ಮಂಜುನಾಥ್, ಪಂಚಾಯ್ತಿ ಬಿಲ್ ಕಲೆಕ್ಟರ್ ಲಕ್ಷ್ಮಣ್ ರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.