ಕೋಲಾರ

ಕೊಂಡಶೆಟ್ಟಹಳ್ಳಿ ಗ್ರಾಪಂ ಆವರಣದಲ್ಲಿ ಗ್ರಾಮಸಭೆ

Published On :

ಟೇಕಲ್: ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕರ ಸಹಕಾರದಿಂದ 3 ಕೋಟಿ 70 ಲಕ್ಷ ರು. ಅನುದಾನದ ಅಡಿಯಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು, ಪೈಪ್ಲೈನ್ ಹಾಗೂ ಪಂಪು ಮೋಟಾರ್ಗಾಗಿ ಬಿಡುಗಡೆಯಾಗಿದ್ದು ಕೆಲವು ಕಡೆ ಕಾಮಗಾರಿ ಪ್ರಾರಂಭಗೊಂಡಿದೆ ಎಂದು ಜಿಪಂ ಸದಸ್ಯೆ ರತ್ನಮ್ಮ ನಂಜೇಗೌಡ ತಿಳಿಸಿದರು. ಅವರು ಕೊಂಡಶೆಟ್ಟಹಳ್ಳಿ ಗ್ರಾಪಂ ಆವರಣದಲ್ಲಿ ಗ್ರಾಮಸಭೆಯ ಮುಖ್ಯ ಆಹ್ವಾನಿತರಾಗಿ ಮಾತನಾಡುತ್ತಿದ್ದರು. ತಾಪಂ ಮಾಜಿ ಅಧ್ಯಕ್ಷ ಕೆ.ವೈ. ನಂಜೇಗೌಡರು ಮಾತನಾಡಿದರು. ಸಭೆಯಲ್ಲಿ ಜಿ.ಪಂ ಮಾಜಿ ಸದಸ್ಯ ಆನೇಪುರದ ಹನುಮಂತಪ್ಪ, ಪದ್ಮನಾಭಯ್ಯ, ಪಿ.ಡಿ.ಒ. ಹೆಚ್.ವಿ. ವಸಂತಕುಮಾರ್ ಮಾತನಾಡಿದರು. ಗ್ರಾಮಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಮಸೂದಾ ಪರ್ವಿನ್ ಸಾದತ್ ಉಲ್ಲಾಖಾನ್ ವಹಿಸಿದ್ದು ನೋಡಲ್ ಅಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಸಿ. ಆನಂದ್ ಕಾರ್ಯನಿರ್ವಹಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.