ಕೋಲಾರ

ಚಿಂತಾಮಣಿ: ಎಬಿವಿಪಿ ಪ್ರತಿಭಟನೆ

Published On :

ಚಿಂತಾಮಣಿ: ಸಮಾಜ ಕಲ್ಯಾಣ ಅಧಿಕಾರಿಗಳು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳ ವೇತನ ನೀಡುವಲ್ಲಿ ಮಲತಾಯಿ ಧೋರಣೆ ಅನುಸರಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆ ಒಳ ಒಪ್ಪಂದ ಮಾಡಿಕೊಂಡು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆಂದು ಎಬಿವಿಪಿ ವತಿಯಿಂದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿನ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದಲ್ಲಿ ತಾರತಮ್ಯ ಮಾಡಿ ಅಡಚಣೆ ಉಂಟುಮಾಡಿ ಪಟ್ಟಣದ ಹಲವು ಪ್ರತಿಷ್ಟಿತ ಕಾಲೇಜು ವಿದ್ಯಾ ಸಂಸ್ಥೆಗಳಲ್ಲಿ ಸಮಾಜ ಕಲ್ಯಾಣ ತಾಲೂಕು ಅಧಿಕಾರಿ ಹಾಗೂ ವ್ಯವಸ್ಥಾಪಕರು ಒಳ ಒಪ್ಪಂದ ಮಾಡಿಕೊಂಡು ಖಾಸಗಿ ಶಾಲೆಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಎಬಿವಿಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಸುರೇಶ್, ಈ ಕೂಡಲೇ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ವ್ಯವಸ್ಥಾಪಕರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಬಾಕಿ ಇರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೂಡಲೇ ಮಂಜೂರು ಮಾಡಬೇಕೆಂದು ಆಗ್ರಹಿಸಿದರು. ನಂತರ ತಾಲೂಕು ದಂಡಾಧಿಕಾರಿಗಳ ಪರವಾಗಿ ಉಪ ತಹಶೀಲ್ದಾರ್ ವಿಠಲ್ರವರಿಗೆ ಮನವಿಪತ್ರವನ್ನು ಸಲ್ಲಿಸಿದರು.
ಮುಖಂಡರಾದ ಮಂಜುನಾಥರೆಡ್ಡಿ, ರಜಿನಿ, ಮಂಜುಳ, ಕೀರ್ತಿ, ಅಶ್ವಿನಿ, ಶೋಭಾ, ಶಿಲ್ಪ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.