ಕೋಲಾರ

ಜಾಗೃತ ವೇದಿಕೆಯಿಂದಕಪ್ಪು ಬಟ್ಟೆ ಧರಿಸಿ ಮೆರವಣಿಗೆ

Published On :

ಚಿಂತಾಮಣಿ: ಹೆಣ್ಣಿನ ಶೋಷಣೆ ಮಾಡುವವರಿಗೆ ಧಿಕ್ಕಾರ ಧಿಕ್ಕಾರ ಎಂದು ಚಿಂತಾಮಣಿ ಜಾಗೃತ ವೇದಿಕೆ ವತಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೂರಾರು ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಮಹಿಳೆಯರಿಗೆ ರಕ್ಷಣೆ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಾ ಮೆರವಣಿಗೆ ನಡೆಸಿದರು.
ಪಟ್ಟಣದಲ್ಲಿ ತಾಲೂಕು ಬ್ರಾಹ್ಮಣರ ಸಂಘ ಹಾಗೂ ಚಿಂತಾಮಣಿ ಜಾಗೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಇಂದು ನೂರಾರು ಮಹಿಳೆಯರು ಪಟ್ಟಣದಲ್ಲಿನ ಆಜಾದ್ ಚೌಕಿನಿಂದ ಮೆರವಣಿಗೆ ನಡೆಸಿ ನಂತರ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಾನವ ಸರಪಳಿ ನಿರ್ಮಿಸಿದರು.
ಈ ಸಂದರ್ಭದಲ್ಲಿ ಸಮಾಜಸೇವಕರಾದ ಸೀತಮ್ಮ ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತನಾಡುತ್ತಾ, ತಾಲೂಕಿನ ವ್ಯಾಪ್ತಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದರು.
ನಂತರ ತಾಲೂಕು ದಂಡಾಧಿಕಾರಿಗಳಾದ ಎಂ.ಎನ್.ಮಂಜುನಾಥ್ರವರಿಗೆ ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಮಹಿಳೆಯರಿಗೆ ರಕ್ಷಣೆ ನೀಡಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಪತ್ರವನ್ನು ನೀಡಿದರು.
ವಕೀಲರಾದ ಬಿ.ಆರ್.ಪ್ರಭಾಕರ್, ರೂಪಶ್ರೀ, ಪತ್ರಕರ್ತ ರವಿಪ್ರಕಾಶ್, ಶ್ರೀನಿವಾಸ್, ಸರಸ್ವತಿ, ಶ್ರೀನಿವಾಸಮೂರ್ತಿ, ಅಶೋಕ್, ಮುರಳಿ, ಲಕ್ಷ್ಮಿ ಸೇರಿದಂತೆ ನೂರಾರು ಮಹಿಳೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.