ಮಾನವ ವರದಿತಯಾರಿಕಾ ಕಾರ್ಯಾಗಾರ
ಶ್ರೀನಿವಾಸಪುರ: ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಯ ಜೀವನದ ಮಟ್ಟ ಸುಧಾರಣೆಯಾಗಬೇಕಾದರೆ ಸರ್ಕಾರದ ಸವಲತ್ತುಗಳ ಬಗ್ಗೆ ಕೂಲಂಕಷವಾಗಿ ತಿಳಿದುಕೊಂಡು ನಂತರ ಸವಲತ್ತಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿಯಾಗಬೇಕೆಂದು ಕೋಲಾರ ಜಿಲ್ಲಾ ಪಂಚಾಯ್ತಿಯ ಮುಖ್ಯ ಯೋಜನಾಧಿಕಾರಿಗಳಾದ ಧನುಷ್ ಕರೆ ನೀಡಿದರು. ಅವರು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಪಂಚಾಯ್ತಿ ವತಿಯಿಂದ ಆಯೋಜಿಸಲಾಗಿದ್ದ ಮಾನವ ವರದಿ ತಯಾರಿಕಾ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚಲ್ದಿಗಾನಹಳ್ಳಿ ತಾಲೂಕು ಸಮಿತಿ ಸದಸ್ಯ ಗುರ್ರಪ್ಪ ಹಾಗೂ ಎನ್.ಜಿ.ಓ.ಎಸ್. ಗಳಾದ ಸಿದ್ದಪ್ಪ ಮಡಿವಾಳ ದಿವ್ಯಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಿಸಿ ವಿಶ್ವನಾಥ್ ವರ್ಗಾವಣೆ
ಕೋಲಾರ: ಕಳೆದ 2012ರ ಮೇ 3ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಕೇವಲ ಒಂದು ವರ್ಷದ ಅವಧಿಯಲ್ಲಿ ನಿರ್ಜಿವವಾಗಿದ್ದ ನೂರಾರು ಕಲ್ಯಾಣಿಗಳಿಗೆ ಜೀವ ತುಂಬಿದ್ದ ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಅವರನ್ನು ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾಯಿಸಿದೆ. ವರ್ಗಾವಣೆ ನಿರೀಕ್ಷೆ ಮಾಡಿರಲಿಲ್ಲ, ಸರ್ಕಾರಿ ಸೇವೆಯಲ್ಲಿ ಇರುವವರು ಎಲ್ಲಿಗಾದರೂ ಹೋಗಿ ಸೇವೆ ಸಲ್ಲಿಸಲೇಬೇಕು. ಕೋಲಾರದ ಜನತೆಯ ಪ್ರೀತಿ, ವಿಶ್ವಾಸವನ್ನು ಯಾವುದೇ ಕಾರಣಕ್ಕೂ ಮರೆಯುವುದಿಲ್ಲ ಎಂದು ಕನ್ನಡಪ್ರಭದೊಂದಿಗೆ ತಮ್ಮ ವರ್ಗಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

