ಕೋಲಾರ

ಮಾಲೂರು: ಕರವೇ ವಿಜಯೋತ್ಸವ

Published On :

ಮಾಲೂರು:  ಕೇಂದ್ರ ಸರ್ಕಾರವು ದೇವನಹಳ್ಳಿಯ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಅವರ ಹೆಸರು ನಾಮಕರಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕರವೇ ಸಂಘಟನೆ ತಾಲೂಕು ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಪಟ್ಟಣದಲ್ಲಿ ಗುರುವಾರ ವಿಜಯೋತ್ಸವ ಆಚರಿಸಿದರು.
ಮಾರಿಕಾಂಬ ಮಹಾದ್ವಾರದ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕರವೇ ಅಧ್ಯಕ್ಷ ಮಂಜುನಾಥ್ ಗೌಡ, ಈ ಹಿಂದೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ದೇವನಹಳ್ಳಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರು ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಹೆಸರಿಡುವಂತೆ ಒತ್ತಾಯಿಸಿ ಹೋರಾಟಕ್ಕೆ ನಡೆಸಲಾಗಿತ್ತು. ಇದಕ್ಕೆ ಇಂದು ಪ್ರತಿಫಲ ಸಿಕ್ಕಿದೆ ಎಂದರು. ಸಂಘಟನೆ ಕಾರ್ಯದರ್ಶಿ ಎಸ್.ಎಂ. ರಾಜು, ನವೀನ್, ಪುರಸಭೆ ಸದಸ್ಯ ಮುರಳೀಧರ್ ಮಾತನಾಡಿದರು. ಪ್ರಸನ್ನ ಕುಮಾರ್, ಮಾಸ್ತಿ ನಾರಾಯಣಸ್ವಾಮಿ, ರವಿ ಕುಮಾರ್, ಲತಾಬಾಯಿ, ಮಂಜುಳಮ್ಮ, ಆಟೋ ನಾರಾಯಣ್, ಆಟೋ ಅಮೀರ್, ಎಚ್.ಕೆ. ಸುರೇಶ್, ಚಲಪತಿ, ಶ್ರೀಧರ್ ಸಿಂಗ್, ಜಯರಾಂ,ನಾಗರಾಜು, ಲವ-ಕುಶ, ಟೇಕಲ್ ಮಂಜು, ಆಂಜಿನಪ್ಪ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.