ಕೋಲಾರದಲ್ಲಿ ಕರವೇ ಹರ್ಷಾಚರಣೆ
ಕೋಲಾರ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕೋಲಾರ ಜಿಲ್ಲಾ ಘಟಕ ಹರ್ಷ ವ್ಯಕ್ತಪಡಿಸಿದೆ.
ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ವಿಜಯೋತ್ಸವ ಆಚರಿಸಿದ ಕರವೇ ಕಾರ್ಯಕರ್ತರು ಪಟಾಕಿ ಸಿಡಿಸಿ ನಂತರ ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದರು.
ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ಅನೇಕ ಸಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ನಾಮಕರಣ ಮಾಡಲು ಒತ್ತಾಯಿಸಿ ಪ್ರತಿಭಟನೆಗಳು ನಡೆದಿತ್ತು, ಕೇಂದ್ರ ಸರ್ಕಾರ ತಡವಾದರೂ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ. ರಾಘವೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಸಾಗರ ಎಲ್.ಇ. ಕೃಷ್ಣೇಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಆರ್. ಅನಿಲ್, ಕೆ.ಜಿ.ಎಫ್ ಅಧ್ಯಕ್ಷ ಎಸ್. ನಂಜುಂಡಪ್ಪ, ಕೀಲುಕೋಟೆ ಶ್ರೀನಿವಾಸ್, ನಂದೀಶ್, ಮುನಿರಾಜ್, ಸುನಿಲ್ಕುಮಾರ್, ಟಿ.ಎನ್. ಅನಂತಲಕ್ಷ್ಮೀ, ಪ್ರಸನ್ನ ಕುಮಾರ್ ಮುಂತಾದವರು ವಿಜಯೋತ್ಸವದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

